ಸಿದ್ದರಾಮಯ್ಯ 
ರಾಜ್ಯ

ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮನವಿಯೇ ಬಂದಿಲ್ಲ: ಸಿಎಂ

ವೀರಶೈವ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮವನ್ನಾಗಿ ಘೋಷಣೆ ಮಾಡಬೇಕು ಎಂದು ತಮಗೆ ಯಾರೂ ಮನವಿಯೇ....

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮವನ್ನಾಗಿ ಘೋಷಣೆ ಮಾಡಬೇಕು ಎಂದು ತಮಗೆ ಯಾರೂ ಮನವಿಯೇ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. 
ರಾಜ್ಯದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರೋಧ ಬಿಸಿಸಿ ಚರ್ಚೆ ನಡೆಯುತ್ತಿದ್ದು, ಈ ಕುರಿತು ಇಂದು ವಿಧಾಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ವೀರಶೈವ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮವನ್ನಾಗಿ ಮಾಡಬೇಕು ಎಂದು ತಮಗೆ ಯಾರೋಬ್ಬರು ಮನವಿ ಸಲ್ಲಿಸಿಲ್ಲ. ಮನವಿ ಬಾರದೇ ಶಿಫಾರಸು ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 
ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂದು ಹೇಳಿ ಯಾರೂ ಮನವಿ ಕೊಟ್ಟಿಲ್ಲ. ಮೊದಲು ಅವರು ಸ್ವತಂತ್ರ ಧರ್ಮದ ಬಗ್ಗೆ ಮನವಿ ಕೊಡಲಿ. ಅದರ ಬಗ್ಗೆ ನಂತರ ನೋಡೋಣ. ಆದರೆ ಮನವಿಯೇ ಬಂದಿಲ್ಲ, ಹಾಗಾಗಿ ಶಿಫಾರಸು ಮಾಡೋದು ಎಲ್ಲಿಂದ ಎಂದರು.
ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು ಎಂಬ ಕೂಗು ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮವಾಗೋದು ಬೇಡ ಎಂದು ಪೇಜಾವರಶ್ರೀ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ್, ಸಚಿವ ವಿನಯ್ ಕುಲಕರ್ಣಿ ಆಗ್ರಹಿಸಿಸುವ ಮೂಲಕ ವಿವಾದಕ್ಕೀಡಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ