ಎನ್. ಧರಂಸಿಂಗ್ 
ರಾಜ್ಯ

ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಇನ್ನಿಲ್ಲ!

ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ (80) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್  (80) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಇಂದು ಬೆಳಗ್ಗೆ ಧರಂಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
2004 ರಿಂದ 2006 ರವರೆಗೆ ಧರಂಸಿಂಗ್   ಮುಖ್ಯಮಂತ್ರಿಯಾಗಿದ್ದರು. 1936ರ ಡಿಸೆಂಬರ್ 25 ರಂದು ಕಲಬುರಗಿಯ ಜೇವರ್ಗಿಯ ನೆಲೋಗಿ ಎಂಬ ಗ್ರಾಮದಲ್ಲಿ ಜನಿಸಿದ್ದ ಧರ್ಮಸಿಂಗ್ ಕರ್ನಾಟಕದ 17ನೇ ಮುಖ್ಯಮಂತ್ರಿಯಾಗಿದ್ದರು. 
ಜೇವರ್ಗಿ ವಿಧಾನಸಭೆ ಕ್ಷೇತ್ರದಿಂದ 7 ಬಾರಿ ಶಾಸಕ ಹಾಗೂ 1 ಬಾರಿ ಸಂಸದರಾಗಿ ಧರಂಸಿಂಗ್  ಆಯ್ಕೆಯಾಗಿದ್ದರು.ಜೆಡಿಎಸ್ -ಕಾಂಗ್ರೆಸ್  ಮೈತ್ರಿ ಸರ್ಕಾರದಲ್ಲಿ 2004 ಮೇ 28 ರಿಂದ 2006 ರ ಫೆಬ್ರವರಿ  3 ರವರೆಗೆ ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು.
ಮಾಜಿ ಮುಖ್ಯಮಂತ್ರಿ ಧರಂಸಿಂಗ್  ಅವರ ಅಂತ್ಯಕ್ರಿಯೆ ನಾಳೆ ಕಲಬುರಗಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel