ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಬರ ಪರಿಹಾರ ನೀಡುವ ಕೇಂದ್ರದ ಮಾನದಂಡ ಸರಿಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ನಿರ್ವಹಣೆಗೆ ಪರಿಷ್ಕೃತ ಕೈಪಿಡಿಯಲ್ಲಿ ಹೊಸ ನಿಯತಾಂಕಗಳನ್ನು ಅಳವಡಿಸಲಾಗಿರುವುದರಿಂದ ತೀವ್ರ ಬರಗಾಲಕ್ಕೆ ತುತ್ತಾಗಿ...

ಬೆಂಗಳೂರು: ಬರ ನಿರ್ವಹಣೆಗೆ ಪರಿಷ್ಕೃತ ಕೈಪಿಡಿಯಲ್ಲಿ ಹೊಸ ನಿಯತಾಂಕಗಳನ್ನು ಅಳವಡಿಸಲಾಗಿರುವುದರಿಂದ ತೀವ್ರ ಬರಗಾಲಕ್ಕೆ ತುತ್ತಾಗಿ ಬೆಳೆ ಹಾನಿಯಾದ ತಾಲ್ಲೂಕುಗಳನ್ನು ಘೋಷಿಸಲು ಕಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ.
ಈ ವರ್ಷದ ಖಾರಿಫ್ ಋತುವಿನಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಕೈಪಿಡಿಯ ನಿಯತಾಂಕಗಳನ್ನು ಪರಿಷ್ಕೃತಗೊಳಿಸಿರುವ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಸದರು ಪ್ರಧಾನಿಯವರಿಗೆ ಪತ್ರ ಬರೆಯಲಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯವರು ತಮ್ಮ ಪತ್ರದಲ್ಲಿ, ಪರಿಷ್ಕೃತ ಕೈಪಿಡಿ ಪ್ರಕಾರ, ತೀವ್ರ ಬರಗಾಲ ಪೀಡಿತ ತಾಲ್ಲೂಕುಗಳಿಗೆ ಮಾತ್ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ಪರಿಹಾರ ನೀಡಲಾಗುತ್ತದೆ. ಈ ನಿಯಮ ಮಾಡಿದರೆ ಬರಗಾಲಕ್ಕೆ ಅಪಾರ ಬೆಳೆ ನಷ್ಟ ಮಾಡಿಕೊಂಡಿರುವ ಸಣ್ಣ ಮತ್ತು ಮಧ್ಯಮ ಗಾತ್ರದ ರೈತರಿಗೆ ಬೆಳೆ ನಷ್ಟಕ್ಕೆ ಸಬ್ಸಿಡಿ ಸಿಗುವುದಿಲ್ಲ ಎಂದು ವಿವರಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನಿಯಮದಂತೆ ಅನುಮೋದನೆಗೊಂಡ 785 ಕೋಟಿ ರೂಪಾಯಿ ಪರಿಹಾರದಲ್ಲಿ 402 ಕೋಟಿ ರೂಪಾಯಿಗಳು ರಾಜ್ಯಕ್ಕೆ ಸಿಕ್ಕಿದೆ. ಇದರಲ್ಲಿ ನೇರ ವರ್ಗಾವಣೆ ಲಾಭ ಯೋಜನೆಯಡಿ ರಾಜ್ಯದ 55,600 ರೈತರು ಹಣ ಪಡೆಯಲು ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ