ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿಗಾಗಿ ಹೋರಾಟ; ನವಲಗುಂದದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು...

ನವಲಗುಂದ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಮತ್ತು ನಿವೃತ್ತ ಶಿಕ್ಷಕ ಡಿ.ವಿ.ಕುರಹಟ್ಟಿ ಅವರ ನೇತೃತ್ವದಲ್ಲಿ ನವಲಗುಂದದಲ್ಲಿ ರೈತರು ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತಾಲೂಕು ಬರಪೀಡಿತವಾಗಿದ್ದು, ರೈತರು ಆರ್ಥಿಕ ಸಂಕಷ್ಟ  ಎದುರಿಸುತ್ತಿದ್ದಾರೆ. ಹೀಗಾಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕು ಎಂದು ಲೋಕನಾಥ ಹೆಬಸೂರು ಒತ್ತಾಯಿಸಿದರು. ಮಹದಾಯಿ ಯೋಜನೆ ಜಾರಿ ಕುರಿತು ಸರ್ಕಾರಗಳು ಸ್ಪಷ್ಟ ನಿಲುವು ತಾಳುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಲೋಕನಾಥ ಹೆಬಸೂರ ಹಾಗೂ ಡಿ.ಬಿ.ಕುರಹಟ್ಟಿ ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇವರ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರವೇ ಹೊಣೆ ಎಂದು ರೈತ ಹೋರಾಟಗಾರರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ