ಕೇಂದ್ರ ಸಚಿವ ಪಿಯೂಶ್ ಗೋಯಲ್ ಹಾಗೂ ಸಿಎ ಸಿದ್ದರಾಮಯ್ಯ 
ರಾಜ್ಯ

ಕೇಂದ್ರದ ಯೋಜನೆಗಳ ಜಾರಿಗೆ ಕರ್ನಾಟಕ ಸರ್ಕಾರದ ನಿರಾಸಕ್ತಿ: ಕೇಂದ್ರ ಸಚಿವ ಪಿಯೂಶ್ ಗೋಯಲ್

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಯಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜ್ಯ ಸರ್ಕಾರ ಇದೇ ಪ್ರವೃತ್ತಿ ಮುಂದುವರೆಸಿದರೆ ತಾವೇ ಯೋಜನೆಗಳನ್ನು ಜನತೆಗೆ ನೇರ ತಲುಪಿಸುತ್ತೇವೆ ಎಂಬ ಎಚ್ಚರಿಕೆ  ನೀಡಿದರು. ಕೇಂದ್ರ ಸರ್ಕಾರದ ಉಜಾಲ (ಎಲ್‌ಇಡಿ ಬಲ್ಬ್  ವಿತರಣೆ), ಉಜ್ವಲ (ಬಿಪಿಎಲ್‌ ಕುಟುಂಬಗಳಿಗೆ ಉಚಿತ ಗ್ಯಾಸ್‌ ಸಂಪರ್ಕ), ರೈತರಿಗೆ ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಮೊದಲಾದ ಯೋಜನೆಗಳ ಅನುಷ್ಠಾನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ಕೇಂದ್ರ ಇಂಧನ ಖಾತೆ ಸಚಿವ ಪಿಯೂಷ್‌ ಗೋಯಲ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ ರಾಜ್ಯ ಸರ್ಕಾರದ ಬದಲಿಗೆ ಕೇಂದ್ರ ಸರ್ಕಾರವೇ ತನ್ನ ಯೋಜನೆಗಳನ್ನು ನೇರ ಜನತೆಗೆ ತಲುಪಿಸುವ ಕಾರ್ಯ  ಮಾಡಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ. "ಕೇಂದ್ರ ಸರಕಾರದ ಉಜಾಲ ಯೋಜನೆಯಡಿ ಈಗಾಗಲೇ 23.89 ಕೋಟಿ ಎಲ್‌ಇಡಿ ಬಲ್ಬ್ ವಿತರಣೆ ಮಾಡಲಾಗಿದೆ. ಆದರೆ, ಸಾಕಷ್ಟು ಎಲ್‌ಇಡಿ ಬಲ್ಬ್ ಕೊಡುತ್ತೇವೆ ಎಂದು  ಹೇಳಿದ್ದರೂ ಕರ್ನಾಟಕ ಕೇವಲ 1.58 ಕೋಟಿ ಮಾತ್ರ ವಿತರಣೆ ಮಾಡಿದೆ. ಅಲ್ಲದೆ, ಮಹಿಳಾ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಉಜ್ವಲ (ಎಲ್‌ಪಿಜಿ ವಿತರಣೆ) ಯೋಜನೆಯನ್ನು ರಾಜ್ಯ ಸರಕಾರ ಸಮರ್ಪಕವಾಗಿ ಅನುಷ್ಠಾನ  ಮಾಡಿಲ್ಲ. ಜತೆಗೆ ರಾಜ್ಯದಲ್ಲಿ ಬರ ಇದ್ದರೂ ರೈತರಿಗೆ ಅನುಕೂಲವಾಗುವ ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ. ಮಣ್ಣು ಆರೋಗ್ಯ ಕಾರ್ಡ್‌ ವಿತರಿಸಲು ವಿಳಂಬ ಮಾಡುತ್ತಿದ್ದಾರೆ"  ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಈ ಆರೋಪವನ್ನು ರಾಜ್ಯ ಸರ್ಕಾರ ಅಲ್ಲಗಳೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!