ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: 16 ವರ್ಷದ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಅರಣ್ಯ ಪ್ರದೇಶದಲ್ಲಿ 16 ವರ್ಷದ ಬಾಲಕಿ ಮೇಲೆ ಇಬ್ಬರು ಯುವಕರು....

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಅರಣ್ಯ ಪ್ರದೇಶದಲ್ಲಿ 16 ವರ್ಷದ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿದ ಘಟನೆ ಮಂಗಳವಾರ ನಡೆದಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಭದ್ರಾವತಿ ತಾಲ್ಲೂಕಿನ ರಂಗನಾಥಪುರದ ರಮೇಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದ್ದು, ಬಾಲಕಿ ಆರೋಪಿಗಳ ಜೊತೆ ಜೋಳದಾಳ್ ಸಮೀಪದ ಅಮ್ಮನಗುಡ್ಡ ದೇವಸ್ಥಾನಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.
ದೇವಸ್ಥಾನಕ್ಕೆ ಬಂದಿದ್ದ ವೇಳೆ ರಮೇಶ್ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ದೃಶ್ಯವನ್ನು ಜತೆಗಿದ್ದ ಸ್ನೇಹಿತ ಅರುಣ್ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಬಳಿಕ ಬಾಲಕಿಗೆ ವಿಡಿಯೋ ತೋರಿಸಿ ಬಹಿರಂಗ ಮಾಡುವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ.
ಈ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರಮೇಶನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT