ರಾಜ್ಯ

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ: ಮೆಟ್ರೋ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಯಥಾಸ್ಥಿತಿ

Shilpa D
ಬೆಂಗಳೂರು: ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹೋರಾಟದ ಭಾಗವೆಂದು ವಾದಿಸಿರುವ ಕೆಲವು ಸಂಘಟನೆಗಳು ಬೆಂಬಲ ಘೋಷಿಸಿವೆ. ಸಾರಾ ಗೋವಿಂದು ಅಧ್ಯಕ್ಷರಾಗಿರುವ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಲಾರಿ ಮಾಲೀಕರ ಸಂಘ, ಕರವೇ ಪ್ರವೀಣ್ ಶೆಟ್ಟಿ ಬಣ, ಕನ್ನಡ ಸೇನೆ, ರೈತ ಸಂಘ, ಬಯಲು ಸೀಮೆ ಹೋರಾಟಗಾರರ ಸಮಿತಿ ಬೆಂಬಲ ಘೋಷಿಸಿದೆ.
ಇಂದಿನ ಬಂದ್‍ಗೆ ಕರವೇ ನಾರಾಯಣಗೌಡ ಬಣ, ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ, ಬಿಎಂಟಿಸಿ ನೌಕರರ ಸಂಘ, ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಹೋಟೆಲ್ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಪೆಟ್ರೋಲ್ ಬಂಕ್ ಮಾಲೀಕರ ಸಂಘ ಬೆಂಬಲ ಸೂಚಿಸಿಲ್ಲ.
ಬಂದ್‍ನಿಂದ ಖಾಸಗಿ ಶಾಲೆಗಳ ಸಂಘ ಹೊರಗುಳಿದಿವೆ. ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಬಂದ್ ಗೆ  ಬೆಂಬಲ ನೀಡಲಾಗಿದೆ. ಬೆಂಗಲೂರಿನಲ್ಲಿ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್, ಮೆಟ್ರೋ ರೈಲು, ಆಟೋ, ಕ್ಯಾಬ್ ಗಳು ಸಂಚರಿಸುತ್ತಿವೆ. ಇದುವರೆಗೂ ಯಾವುದೇ ಅಹಿತರಕರ ಘಟನೆಯ ವರದಿಯಾಗಿಲ್ಲ. 
SCROLL FOR NEXT