ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ. ಕುಮಾರಸ್ವಾಮಿ ಅವರು ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ಮುಂಚೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಬೆಂಗಳೂರಿನ ವಿಶೇಷ ಕೋರ್ಟ್ ವಜಾಗೊಳಿಸಿದ್ದರಿಂದ ಕಂಗಾಲಾಗಿರುವ ಕುಮಾರಸ್ವಾಮಿ ಅವರು ಈಗ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಎಚ್ ಡಿ ಕುಮಾರ ಸ್ವಾಮಿ ಅವರು ಜಂತಕಲ್ ಮೈನಿಂಗ್ ಕಂಪನಿಯಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಕುಮಾರಸ್ವಾಮಿ ಅವರು ತಮ್ಮ ವಕೀಲ ಹಷ್ಮತ್ ಪಾಷಾ ಅವರ ಮೂಲಕ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.