ಅನುರಾಗ್ ತಿವಾರಿ 
ರಾಜ್ಯ

ಐಎಎಸ್ ಅಧಿಕಾರಿ ತಿವಾರಿ ಕುಟುಂಬಸ್ಥರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಲಖ್ನೋದಲ್ಲಿ ಸಾವನ್ನಪ್ಪಿದ ಐಎಎಸ್‌ ಅಧಿಕಾರಿ ಅನುರಾಗ್ ತಿವಾರಿ ಕುಟುಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶೀಘ್ರವಾಗಿ ತನಿಖೆ ..

ಬೆಂಗಳೂರು: ಲಖ್ನೋದಲ್ಲಿ ಸಾವನ್ನಪ್ಪಿದ ಐಎಎಸ್‌ ಅಧಿಕಾರಿ ಅನುರಾಗ್ ತಿವಾರಿ ಕುಟುಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶೀಘ್ರವಾಗಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಅನುರಾಗ್‌ ತಿವಾರಿ ತಂದೆ, ತಾಯಿ, ಸಹೋದರ ಮಯಾಂಕ್‌ ತಿವಾರಿ ಹಾಗೂ ಮಯಾಂಕ್‌ ಅವರ ಪತ್ನಿಗೆ, ತಮ್ಮಿಂದ ಸಾಧ್ಯವಾಗುವ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
ನೆರವಿಗೆ ಸಂಬಂಧಿಸಿದಂತೆ ಕಾನೂನು ವ್ಯಾಪ್ತಿಯೊಳಗಿರುವ ಸಾಧ್ಯತೆಗಳನ್ನು ಪರಿಶೀಲಿಸಿ’ ಎಂದು ಸ್ಥಳದಲ್ಲೇ ಇದ್ದ ತಮ್ಮ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು.
ತಮ್ಮ ಪೋಷಕರು ಕಳೆದ 10 ವರ್ಷಗಳಿಂದ ಅನುರಾಗ್ ತಿವಾರಿ ಜೊತೆ ವಾಸಿಸುತ್ತಿದ್ದರು. ನಾವು ಇದುವರೆಗೂ ಉತ್ತರ ಪ್ರದೇಶದ ಕುಗ್ರಾಮವೊಂದರಲ್ಲಿ ಬದುಕುತ್ತಿದ್ದೇವೆ. ನಮಗೆ ನಗರದಲ್ಲಿ ವಾಸಿಸಲು ಒಂದು ಮನೆ ಕಲ್ಪಿಸಿಕೊಡುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ. ತಮ್ಮ ಕೈಯ್ಯಿಂದ ಸಾಧ್ಯವಾಗುವ ಎಲ್ಲಾ ರೀತಿಯ ಅನುಕೂಲ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ತಿವಾರಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರಿಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು  ಸಹೋದರ ಮಯಾಂಕ್ ತಿಳಿಸಿದ್ದಾರೆ. 1981ರ ಮೇ 17ರಂದು ಜನಿಸಿದ್ದ ಅನುರಾಗ್ ತಿವಾರಿ, ಕಳೆದ ತಿಂಗಳು ತಮ್ಮ ಹುಟ್ಟುಹಬ್ಬದ ದಿನದಂದೇ ಸಾವನ್ನಪ್ಪಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!