ಪಾರ್ಕಿಂಗ್ ವಿಚಾರಕ್ಕೆ ವಾಗ್ವಾದ; ಹಿರಿಯ ನಾಗರಿಕನ ಕಪಾಳಕ್ಕೆ ಹೊಡೆದ ಎಎಸ್ಐ 
ರಾಜ್ಯ

ಪಾರ್ಕಿಂಗ್ ವಿಚಾರಕ್ಕೆ ವಾಗ್ವಾದ; ಹಿರಿಯ ನಾಗರಿಕನ ಕಪಾಳಕ್ಕೆ ಹೊಡೆದ ಎಎಸ್ಐ

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಎಎಸ್ಐ ಹಾಗೂ ಬೈಕ್ ಮಾಲೀಕನ ನಡುವೆ ಜಟಾಪಟಿ ನಡೆದಿದ್ದು, ವಾಹನ ಸವಾರನ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಎಎಸ್ಐ ಹಲ್ಲೆ ಮಾಡಿರುವ ಘಟನೆ ನಗರದ ಚಾಮರಾಜಪೇಟೆ...

ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಎಎಸ್ಐ ಹಾಗೂ ಬೈಕ್ ಮಾಲೀಕನ ನಡುವೆ ಜಟಾಪಟಿ ನಡೆದಿದ್ದು, ವಾಹನ ಸವಾರನ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಎಎಸ್ಐ ಹಲ್ಲೆ ಮಾಡಿರುವ ಘಟನೆ ನಗರದ ಚಾಮರಾಜಪೇಟೆ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. 
ಉಮಾಪತಿ ಹಲ್ಲೆಗೊಳಗಾದ ವೃದ್ಧ. ನಗರದ ಚಾಮರಾಜಪೇಟೆ ಸಾಯಿ ಕೆಫೆ ಹೋಟೆಲ್ ಬಳಿ ಘಟನೆ ನಡೆದಿದೆ. ನೋ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿದ್ದಕ್ಕೆ ಸಂಬಂಧಿಸಿದಂತೆ ಎಎಸ್ಐ ಜೊತೆಗೆ ಗಲಾಟೆಯಾಗಿದೆ. 
ತಮ್ಮ ಪುತ್ರನೊಂದಿಗೆ ಬಂದಿದ್ದ ಉಮಾಪತಿಯವರು ಬೈಕ್ ನ್ನು ಚಾಮರಾಜಪೇಟೆಯಲ್ಲಿರುವ ಸಾಯಿ ಕೆಫೆ ಬಳಿ ನಿಲ್ಲಿಸಿದ್ದಾರೆ. ನೋ ಪಾರ್ಕಿಂಗ್ ಸ್ಥಳವಾದ್ದರಿಂದ ಸಂಚಾರಿ ಪೊಲೀಸರು ವಾಹನವನ್ನು ತೆಗೆದುಕೊಂಡು ಹೋಗಿದ್ದಾರೆ. 
ನಂತರ ಉಮಾಪತಿಯವರು ಪುತ್ರನೊಂದಿಗೆ ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಹನುಮಂತರಾಯ ಅವರೊಂದಿಗೆ ಮಾತಿನ ಚಕಮಕಿ ನಡೆದಿದೆ. ನೋ ಪಾರ್ಕಿಂಗ್ ಸ್ಥಳದಲ್ಲಿ ನಾವು ವಾಹನವನ್ನು ನಿಲ್ಲಿಸಿಲ್ಲ ಎಂದು ಉಮಾಪತಿಯವರು ಹೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ. ನಂತರ ಹನುಮಂತರಾಯ ಅವರು ಉಮಾಪತಿಯವರ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಈ ದೃಶ್ಯಾವಳಿಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಹಲ್ಲೆಯ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಪ್ರಸಾರಗೊಂಡಿವೆ. 
ಘಟನೆ ಬಳಿಕ ಉಮಾಪತಿಯವರು ಚಾಮರಾಜಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆಂದು ಪ್ರತ್ಯಕ್ಷದರ್ಶಿ ಗಂಗಾಧರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT