ಎಚ್.ಡಿ.ಕುಮಾರಸ್ವಾಮಿ 
ರಾಜ್ಯ

ಜಂತಕಲ್ ಮೈನಿಂಗ್ ಪ್ರಕರಣ: ಜೂ.20ರವರೆಗೆ ಎಚ್ ಡಿಕೆ ಬಂಧಿಸದಂತೆ ಎಸ್ಐಟಿಗೆ 'ಹೈ' ಆದೇಶ

ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ. ಕುಮಾರಸ್ವಾಮಿ....

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಜೂನ್ 20ರವರೆಗೆ ಎಚ್ ಡಿಕೆ ಅವರನ್ನು ಬಂಧಿಸದಂತೆ ಎಸ್ ಐಟಿಗೆ ಗುರುವಾರ ಆದೇಶಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾ.ರತ್ನಕಲಾ ಅವರು, ಜೂನ್ 19ರವರೆಗೆ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಎಸ್ಐಟಿಗೆ ಆದೇಶ ನೀಡಿ, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.
ಜಂತಕಲ್ ಮೈನಿಂಗ್ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಎಸ್ಐಟಿ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ 150 ಕೋಟಿ ರು. ಗಣಿ ಲಂಚ ಸ್ವೀಕರಿಸಿರುವುದಾಗಿ ಆರೋಪಿಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಎಸ್ಐಟಿಗೆ ಸಾಕ್ಷ್ಯಾಧಾರಗಳನ್ನು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್