ಗುಲ್ಬರ್ಗಾ ವಿವಿ 
ರಾಜ್ಯ

ಸಂದರ್ಶನದ ವೇಳೆ ಯುವತಿಯೊಂದಿಗೆ ಅಸಭ್ಯ ವರ್ತನೆ: ಗುಲ್ಬರ್ಗಾ ವಿವಿ ಪ್ರಾಧ್ಯಾಪಕರ ಬಂಧನ

ಪಿಎಚ್ ಡಿ ಪ್ರವೇಶಕ್ಕಾಗಿ ಸಂದರ್ಶನ ನಡೆಸುತ್ತಿದ್ದ ವೇಳೆ ಅಸಭ್ಯವಾದ ಪ್ರಶ್ನೆ ಕೇಳಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ....

ಕಲಬುರ್ಗಿ: ಪಿಎಚ್ ಡಿ ಪ್ರವೇಶಕ್ಕಾಗಿ ಸಂದರ್ಶನ ನಡೆಸುತ್ತಿದ್ದ ವೇಳೆ ಅಸಭ್ಯವಾದ ಪ್ರಶ್ನೆ ಕೇಳಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗುಲ್ಬರ್ಗಾ ವಿಶ್ವವಿದ್ಯಾಲದಯದ ಇಂಗ್ಲಿಷ್ ಪ್ರಾಧ್ಯಾಪಕ ಡಾ.ರಮೇಶ್ ರಾಠೋಡ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಇನ್ನು ರಮೇಶ್ ರಾಠೋಡ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಲ್ಬರ್ಗಾ ವಿವಿಯ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ವಿ.ಆರ್ ಬಡಿಗೇರ್ ಅವರನ್ನು ಸಹ ಗುಲ್ಬರ್ಗಾ ವಿಶ್ವವಿದ್ಯಾಲಯದ ಪೊಲೀಸರು ಇಂದು ಬಂಧಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ವಿವಿಯ ಇಂಗ್ಲಿಷ್ ವಿಭಾಗದಲ್ಲೇ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿ ಜೂನ್ 7ರಂದು ಪಿಎಚ್ ಡಿ ಪ್ರವೇಶಕ್ಕಾಗಿ ರಾಠೋಡ್ ಮುಂದೆ ಸಂದರ್ಶನಕ್ಕೆ ಹಾಜರಾಗಿದ್ದರು. ಈ ವೇಳೆ ರಾಠೋಡ್ ಅವರು ತಮಗೆ ವೈಯಕ್ತಿವಾದ ಪ್ರಶ್ನೆಗಳನ್ನು ಕೇಳಿದ್ದಲ್ಲದೆ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. 
ಇದರ ಬೆನ್ನಲ್ಲೇ ವಿ.ಆರ್ ಬಡಿಗೇರ್ ಅವರು ತಮ್ಮ ಹಳೆ ವಿದ್ಯಾರ್ಥಿಗಳನ್ನು ಕಳುಹಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರಾಠೋಡ್ ಅವರು ಪೊಲೀಸರಿಗೆ ದೂರು ನೀಡಿದ್ದರು.
ವಿವಿಯ ಇಬ್ಬರು ಪ್ರಾಧ್ಯಾಪಕರ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು, ಇಂದು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪ ಮಾಡಿರುವ ವಿದ್ಯಾರ್ಥಿನಿ ಇಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದು, ಕಳೆದ ಎರಡು ವರ್ಷಗಳಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾಳೆ. ಹೀಗಾಗಿ ಪ್ರತಿನಿತ್ಯ ಒಂದಿಲ್ಲೊಂದು ರೀತಿಯಲ್ಲಿ ಪ್ರೊ. ರಮೇಶ ರಾಠೋಡ್ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. 
ಆದರೆ ರಮೇಶ ರಾಠೋಡ್ ಈ ಆರೋಪವನ್ನು ನಿರಾಕರಿಸಿದ್ದಾರೆ. ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿರೋ ಪ್ರೊ. ಬಡಿಗೇರ್ ಈ ಪ್ರಕರಣದ ಸೂತ್ರದಾರರಾಗಿದ್ದಾರೆ. ವಿದ್ಯಾರ್ಥಿನಿಯನ್ನು ಬಳಸಿಕೊಂಡು ನನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾರೆ ಎಂದು ರಮೇಶ್‌ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT