ಬಲೂಚಿಸ್ತಾನದಲ್ಲಿ ನಡೆದ ಸಂಭ್ರಮಾಚರಣೆ (ಸಾಂದರ್ಭಿಕ ಚಿತ್ರ) 
ರಾಜ್ಯ

ಪಾಕ್ ಗೆ ಗೆಲುವು: ಕಾಶ್ಮೀರದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೂ ಸಂಭ್ರಮ!

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ನಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಕಾಶ್ಮೀರದಲ್ಲಿ ನಡೆದ ಸಂಭ್ರಮಾಚರಣೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಅಂತುಹುದೇ ಮತ್ತೊಂದು ಪ್ರಕರಣ ಕರ್ನಾಕದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ನಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಕಾಶ್ಮೀರದಲ್ಲಿ ನಡೆದ ಸಂಭ್ರಮಾಚರಣೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಅಂತುಹುದೇ ಮತ್ತೊಂದು  ಪ್ರಕರಣ ಕರ್ನಾಕದಲ್ಲಿ ಬೆಳಕಿಗೆ ಬಂದಿದೆ.

ಪತ್ರಿಕೆಯೊಂದು ವರದಿ ಮಾಡಿರುವಂತೆ ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ, ಹಾವೇರಿ ಜಿಲ್ಲೆಯ ಸವಣೂರು, ದಾವಣಗೆರೆ ನಗರದ ವಿನೋಬಾನಗರ, ಕೊಡಗಿನ ಸುಂಟಿಕೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಹಲವು  ಯುವಕರ ಗುಂಪು ಪಾಕ್‌ ಪರ ‘ಜಿಂದಾಬಾದ್‌' ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದೆ. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷನ ಪುತ್ರನೂ ಸೇರಿ ಕೆಲ ಕಿಡಿಗೇಡಿ ಯುವಕರ ಈ ದೇಶವಿರೋಧಿ ಕೃತ್ಯದಿಂದಾಗಿ ಸ್ಥಳದಲ್ಲಿ ಉದ್ವಿಗ್ನ  ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಕೋಮುಸಾಮರಸ್ಯಕ್ಕೂ ಧಕ್ಕೆಯುಂಟಾಗುವಂತೆ ಮಾಡಿದೆ.

ಬಾಗಲಕೋಟೆಯ ಹಿಪ್ಪರಗಿ ಗ್ರಾಮದಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಒಂದು ಕೋಮಿನ ಯುವಕರ ತಂಡ ಪಟಾಕಿ ಸಿಡಿಸಿ ಸಂಭ್ರಮಿಸಿ ‘ಪಾಕಿಸ್ತಾನ್‌ ಜಿಂದಾಬಾದ್‌' ಎಂಬ ಘೋಷಣೆಗಳನ್ನು ಕೂಗಿದೆ. ಇದರಿಂದ  ರೊಚ್ಚಿಗೆದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಕ್ಕೆ ಕೆಲ ತಿಂಗಳ ಹಿಂದೆ ಕೇರಳದಿಂದ ವ್ಯಾಪಾರಕ್ಕಾಗಿ ಒಂದು ಕೋಮಿನ ಯುವಕರು ಬಂದಿದ್ದು ಅವರೇ ಈ ಕೆಲಸ ಮಾಡಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿರುವ  ಸ್ಥಳೀಯರು, ಅಂಥವರನ್ನು ಬಂಧಿಸಿ ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಗ್ರಾಮದ ಆ ಕೋಮಿನ ಸಮುದಾಯದ ಹಿರಿಯರೇ ಆಗಮಿಸಿ, ‘‘ಮುಂದೆ ಈ ರೀತಿ ಘಟನೆಗಳು ಆಗದಂತೆ ನೋಡಿ ಕೊಳ್ಳಲಾಗುವುದು. ಭಾನುವಾರ ರಾತ್ರಿ ಸಂಭ್ರಮಿಸಿದ ಯುವಕರನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಲಾಗುವುದು'' ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದೆ.

ಅಂತೆಯೇ ದುಷ್ಕರ್ಮಿಗಳ ದೇಶವಿರೋಧಿ ಕೃತ್ಯ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಅಖಂಡತೆಯನ್ನೇ ಪ್ರಶ್ನಿಸುವಂಥ ಈ ನಡೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ  ವ್ಯಕ್ತವಾಗುತ್ತಿದ್ದು, ಗಡೀಪಾರು ಮಾಡುವಂತೆ ಆಗ್ರಹ ಕೇಳಿಬಂದಿದೆ. ಪ್ರಕರಣ ಸಂಬಂಧ ಈ ವರೆಗೂ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!