ಹಾವೇರಿ: ಕಳೆದ ಭಾನುವಾರ ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಸಂಭ್ರಮ ಆಚರಿಸಿದೆ ವ್ಯಕ್ತಿಯೊಬ್ಬರ ವಿರುದ್ಧ ದೇಶ ದ್ರೋಹದ ಕೇಸ್ ದಾಖಲಿಸಲಾಗಿದೆ.
ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ ನಂತರ ಪಾಕ್ ಪರ ಘೋಷಣೆ ಕೂಗಿ ಸಂಭ್ರಮ ಆಚರಿಸಿದ 35 ವರ್ಷದ ಶಬಿರ್ ಅಹ್ಮದ್ ನನ್ನು ಹಾವೇರಿ ಜಿಲ್ಲೆಯ ಸವಣೂರು ಪೊಲೀಸರು ಬಂಧಿಸಿದ್ದು, ಆರೋಪಿಯ ವಿರುದ್ಧ ಸೋಮವಾರ ರಾತ್ರಿ ದೇಶದ್ರೋಹದ ಕೇಸ್ ದಾಖಲಿಸಿಕೊಂಡಿದ್ದಾರೆ.
ಶಬಿರ್ ಅಹ್ಮದ್ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷೆನ್ 124ಎ(ದೇಶದ್ರೋಹ) ಹಾಗೂ ಸೆಕ್ಷೆನ್ 153ಎ ಅಡಿ ಎಫ್ಐಆರ್ ದಾಖಲಿಸಿದ್ದಾರೆ.
ಶಬಿರ್ ಅಹ್ಮದ್ ನನ್ನು ಪೊಲೀಸರು ಇಂದು ಸ್ಥಳೀಯ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics