ಸಾಂದರ್ಭಿಕ ಚಿತ್ರ 
ರಾಜ್ಯ

ಬಂಟ್ವಾಳ: ಹಾಡಹಗಲೇ ಎಸ್ ಡಿಪಿಐ ಕಾರ್ಯಕರ್ತನ ಭೀಕರ ಹತ್ಯೆ

ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ಕಾರ್ಯಕರ್ತರಾಗಿದ್ದ ಆಟೊ ಚಾಲಕ ಅಶ್ರಫ್‌ ಕಲಾಯಿ (30) ಎಂಬುವವರನ್ನು ಬುಧವಾರ ಮಧ್ಯಾಹ್ನ ..

ಮಂಗಳೂರು:  ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ಕಾರ್ಯಕರ್ತರಾಗಿದ್ದ ಆಟೊ ಚಾಲಕ ಅಶ್ರಫ್‌ ಕಲಾಯಿ (30) ಎಂಬುವವರನ್ನು ಬುಧವಾರ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬೆಂಜನಪದವು ಬಳಿ  ಹತ್ಯೆ ಮಾಡಲಾಗಿದೆ, ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿಯಾದ ಅಶ್ರಫ್‌ ಎಸ್‌ಡಿಪಿಐ ವಲಯ ಸಮಿತಿಯ ಅಧ್ಯಕ್ಷರಾಗಿದ್ದರು. ಪಕ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಅಮ್ಮುಂಜೆಯಲ್ಲಿ ಬುಧವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಾಡಿಗೆ ನೆಪದಲ್ಲಿ ಆಟೊದಲ್ಲಿ ಕರೆದೊಯ್ದ ದುಷ್ಕರ್ಮಿಗಳು ಬೆಂಜನಪದವು ಕೆನರಾ ಕಾಲೇಜು ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೆಲವು ದಿನಗಳಿಂದ ಗಲಭೆ ಪೀಡಿತವಾಗಿರುವ ಕಲ್ಲಡ್ಕ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದೆ. ಬೆಂಜನಪದವು, ಮೆಲ್ಕಾರ್‌ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!