ನಾಪತ್ತೆಯಾಗಿರುವ ವಿದ್ಯಾರ್ಥಿ ಮಂಜುನಾಥ್ 
ರಾಜ್ಯ

ಜರ್ಮನಿಯಲ್ಲಿ ಬಾಗಲಕೋಟೆ ಮೂಲದ ವಿದ್ಯಾರ್ಥಿ ನಾಪತ್ತೆ!

ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಜರ್ಮನಿಯಲ್ಲಿ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹ್ಯಾಂಬರ್ಗ್: ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಜರ್ಮನಿಯಲ್ಲಿ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕರ್ನಾಟಕದ ಬಾಗಲಕೋಟೆ ಮೂಲದ ಮಂಜುನಾಥ್ ಎಂಬ ವಿದ್ಯಾರ್ಥಿಯು ಜರ್ಮನಿಯ ಹ್ಯಾಂಬರ್ಗ್ ನಲ್ಲಿ ನಾಪತ್ತೆಯಾಗಿದ್ದು, ಹ್ಯಾಂಬರ್ಗ್ ನದಿ ದಡದಲ್ಲಿ ಮಂಜುನಾಥ್ ನ ವಸ್ತುಗಳ ಪತ್ತೆಯಾಗಿವೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. ಮಂಜುನಾಥ್ ಬಳಸುತ್ತಿದ್ದ ಸೈಕಲ್, ಇತರೆ ವಸ್ತುಗಳು ಸೇರಿದಂತೆ ಪತ್ರವೊಂದು ಪತ್ತೆಯಾಗಿದ್ದು, ಪತ್ರದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

28 ವರ್ಷದ ಮಂಜುನಾಥ್ ಸಿದ್ದಣ್ಣ ಚುರಿ ಬಿಇ ವಿದ್ಯಾರ್ಥಿಯಾಗಿದ್ದು, ಉನ್ನತ ವ್ಯಾಸಂಗಕ್ಕಾಗಿ ಹ್ಯಾಂಬರ್ಗ್ ಗೆ ತೆರಳಿದ್ದರು. ಮೂಲತಃ ಬಾಗಲಕೋಟೆ ಜಿಲ್ಲೆಯ ಸಿಮಿಕೇರಿ ಗ್ರಾಮದವರಾದ ಮಂಜುನಾಥ್ ಬಸವೇಶ್ವ ಇಂಜಿನಿಯರಿಂಗ್  ಕಾಲೇಜಿನಲ್ಲಿ ಬಿಇ ಮುಗಿಸಿದ್ದರು. ಬಳಿಕ ಮಾಸ್ಟರ್ ಸಾಫ್ಟ್ ವೇರ್ ಉನ್ನತ ವ್ಯಾಸಂಗಕ್ಕಾಗಿ 2 ವರ್ಷಗಳ ಹಿಂದೆ ಮಂಜುನಾಥ್ ಜರ್ಮನಿಯ ಹ್ಯಾಂಬರ್ಗ್ ಗೆ ತೆರಳಿದ್ದರು. ಇದೇ ಸೆಪ್ಚೆಂಬರ್ ನಲ್ಲಿ ಊರಿಗೆ ಬರುವುದಾಗಿ ಮಂಜುನಾಥ್  ತಿಳಿಸಿದ್ದರು. ಆದರೆ ಇದೀಗ ಮಂಜುನಾಥ್ ನಾಪತ್ತೆಯಾಗಿದ್ದಾನೆ ಜರ್ಮನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾಗಿಳು ಸೋಮವಾರ ಮಾಹಿತಿ ನೀಡಿದ್ದರು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ತನಿಖೆ ನಡೆಸುತ್ತಿದ್ದ ಜರ್ಮನ್ ಪೊಲೀಸರಿಗೆ ಮಂಜುನಾಥ್ ರೂಮಿನಲ್ಲಿ ಪತ್ರವೊಂದು ದೊರೆತಿದ್ದು, ಇದು ಭಾರತೀಯ ಭಾಷೆಯಲ್ಲಿದ್ದರಿಂದ ಅದನ್ನು ಓದಲು ಸಾಧ್ಯವಾಗದೇ ಭಾರತಯೀ ರಾಯಭಾರ ಕಚೇರಿ  ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಇದೀಗ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಮಂಜುನಾಥ್ ನಾಪತ್ತೆ ಕುರಿತಂತೆ ಆತನ ಸ್ನೇಹಿತ ಅನೀಶ್ ದೇಶಪಾಂಡೆ ಪೊಲೀಸರಿಗೆ ದೂರು ನೀಡಿದ್ದ ಎಂದು ತಿಳಿದುಬಂದಿದೆ. ಪ್ರಸ್ತುತ ನಾಪತ್ತೆಯಾಗಿರುವ ಮಂಜುನಾಥ್ ಪತ್ತೆಯಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರದ  ಮೊರೆ ಹೋಗಿದ್ದು, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ವಿದೇಶಾಂಗ ಇಲಾಖೆ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ಪ್ರಕರಣವನ್ನು ತನಿಖೆ  ನಡೆಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT