ಬಳ್ಳಾರಿ: ಬಳ್ಳಾರಿ ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಬಂಡಿ ರಮೇಶ್(35) ಅವರನ್ನು ಗುರುವಾರ ಗುಗ್ಗರ ಹಟ್ಟಿ ಸಮೀಪದ ಡಾಬಾವೊಂದದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬಳ್ಳಾರಿ ನಗರ ನಿವಾಸಿಯಾಗಿದ್ದ ಬಿಜೆಪಿ ಮುಖಂಡ ಬಂಡಿ ರಮೇಶ್ ಅವರು ಕೊಲೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದರು ಎನ್ನಲಾಗಿದೆ.
ಬಿಜೆಪಿ ಸಂಸದ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸೋಮಶೇಖರ ರೆಡ್ಡಿ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಂಡಿ ರಮೇಶ್ ಅವರ ಹತ್ಯೆಗೆ ಹಳೆ ದ್ವೇಷ ಕಾರಣ ಎನ್ನಲಾಗಿದೆ.
ಬಳ್ಳಾರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics