ಚಾಂಪಿಯನ್ಸ್ ಟ್ರೋಫಿ ಗೆದ್ದ ಪಾಕಿಸ್ತಾನ ತಂಡ 
ರಾಜ್ಯ

ಪಾಕ್ ಗೆಲುವಿಗೆ ಸಂಭ್ರಮ: ಕೊಡಗಿನ ಮೂವರು ಯುವಕರಿಗೆ ಜೈಲೇ ಗತಿ

ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಪಟಾಕಿ....

ಬೆಂಗಳೂರು: ಲಂಡನ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದ ಕೊಡಗು ಜಿಲ್ಲೆಯ ಮೂವರು ಮುಸ್ಲಿಂ ಯುವಕರು ಈಗ ಜೈಲು ಪಾಲಾಗಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆತಂದ ಆರೋಪದ ಮೇಲೆ ಕಳೆದ ಸೋಮವಾರ ಬಂಧನಕ್ಕೊಳಗಾಗಿರುವ ಮೂವರು ಯುವಕರ ವಿರುದ್ದ ಜಾಮೀನು ರಹಿತ ಪ್ರಕರಣದಡಿ ಕೇಸ್ ದಾಖಲಿಸಿರುವುದರಿಂದ ಅವರಿಗೆ ಜಾಮೀನು ಸಿಗಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸುತ್ತಿದ್ದಂತೆ ಕುಶಾಲನಗರ ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಝಹೀರ್, ರಿಯಾಜ್, ಅಬ್ದುಲ್ ಸಮ್ಮದ್ ಹಾಗೂ ಮುನೀರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ. ಆದರೆ ಮುನೀರ್ ತಪ್ಪಿಸಿಕೊಂಡಿದ್ದಾನೆ ಎಂದು ಕೊಡಗು ಹಿರಿಯ ಪೊಲೀಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಅವರು ಹೇಳಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ನಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಕಾಶ್ಮೀರದಲ್ಲಿ ನಡೆದ ಸಂಭ್ರಮಾಚರಣೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಅಂತುಹುದೇ ಪ್ರಕರಣಗಳು ಕರ್ನಾಕದಲ್ಲೂ ಬೆಳಕಿಗೆ ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!