ಕೆ.ಬಿ ಕೋಳಿವಾಡ 
ರಾಜ್ಯ

ರವಿ ಬೆಳಗೆರೆ ಸೇರಿ ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು ಶಿಕ್ಷೆ: ವಿಧಾನಸಭೆ ಒಪ್ಪಿಗೆ

ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ಗೆ ಸ್ಪೀಕರ್‌ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ...

ಬೆಂಗಳೂರು:  ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ಗೆ ಸ್ಪೀಕರ್‌ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ.
ಶಾಸಕ ನಾಗರಾಜ್‌ ಹಾಗೂ ಕೆ.ಬಿ. ಕೋಳಿವಾಡ  ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಯಲ್ಲಿ ಪತ್ರಿಕೆ ಸಂಪಾದಕರ ವಿರುದ್ಧ ದೂರು ನೀಡಲಾಗಿ.  ದೂರಿನನ್ವಯ ಸಮಿತಿಯು ರವಿ ಬೆಳಗೆರೆ ಅವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸುವಂತೆ ಶಿಫಾರಸು ಮಾಡಿತ್ತು. ಸಮಿತಿಯ ಶಿಫಾರಸಿನಂತೆ ಅವರ ವಿರುದ್ಧ 1 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಬೇಕೆಂದು ಸದನದಲ್ಲಿ ಪಕ್ಷಭೇದ ಮರೆತು ಶಾಸಕರು ಒತ್ತಾಯ ಮಾಡಿದರು.
ಸದನದ ಒಪ್ಪಿಗೆಯ ಹಿನ್ನೆಲೆಯಲ್ಲಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಶಿಕ್ಷೆ ಘೋಷಿಸಿದ್ದಾರೆ. ಅದೇ ರೀತಿ ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್ ವಿರುದ್ಧ ಯಲಹಂಕ ವಾಯ್ಸ್ ಪತ್ರಿಕೆಯಲ್ಲಿ ನಿರಂತರವಾಗಿ ಅವಹೇಳಕಾರಿಯಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಹಕ್ಕುಚ್ಯುತಿ ಮಂಡಿಸಿದ್ದರು.
ಪತ್ರಿಕೆ ಸಂಪಾದಕರು ಸದನವನ್ನೇ ಅವಮಾನಿಸುವ ರೀತಿಯಲ್ಲಿ ವರದಿ ಗಳನ್ನು ಪ್ರಕಟಿಸುತ್ತಿದ್ದಾರೆ. ಈ ರೀತಿಯ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿಯ ಬ್ಲಾಕ್‌ ಮೇಲ್‌ ಮಾಡುವ ಪತ್ರಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 
2014ರ ಸೆಪ್ಟಂಬರ್ ತಿಂಗಳ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸ್ಪೀಕರ್ ಕೋಳಿವಾಡ ಸೇರಿದಂತೆ ಹಲವು ರಾಜಕಾರಣಿಗಳ ವಿರುದ್ಧ ಲೇಖನ ಪ್ರಕಟವಾಗಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT