ಬೆಳಗಾವಿ ಪಾಲಿಕೆ 
ರಾಜ್ಯ

ಬೆಳಗಾವಿ ಪಾಲಿಕೆಯಲ್ಲಿ ಮೊಳಗಿದ ನಾಡಗೀತೆ; ಎದ್ದುನಿಂತು ಗೌರವ ತೋರಿದ ಎಂಇಎಸ್!

ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿದ್ದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಸದಸ್ಯರು...

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿದ್ದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಸದಸ್ಯರು ಯಾವುದೇ ತಕರಾರು ಮಾಡದೇ ಎದ್ದು ನಿಂತು ಗೌರವ ಸಲ್ಲಿಸಿದರು. 
ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆಯು ಇಂದಿಗೆ ನಿಗದಿಯಾಗಿತ್ತು. ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಪ್ರಾದೇಶಿಕ ಆಯುಕ್ತ ಎನ್ ಜಯರಾಮ್ ಮಾತನಾಡಿ ಸರ್ಕಾರದ ಯಾವುದೇ ಕಾರ್ಯಕ್ರಮ ಪ್ರಾರಂಭಿಸುವಾಗ ನಾಡಗೀತೆ ಹಾಗೂ ಮುಕ್ತಾಯದ ವೇಳೆ ರಾಷ್ಟ್ರಗೀತೆ ನುಡಿಬೇಕು. ಈಗ ನಾಡಗೀತೆ ನುಡಿಸಲಾಗುವುದು ಎಲ್ಲರೂ ಎದ್ದುನಿಂತು ಗೌರವ ಸಲ್ಲಿಸಬೇಕು ಎಂದು ಸೂಚಿಸಿದರು.
ನಾಡಗೀತೆ ಆರಂಭಗೊಳ್ಳುತ್ತಿದ್ದಂತೆ ಎಂಇಎಸ್ ಬೆಂಬಲಿತ ಮೇಯರ್ ಸಂಜೋತಾ ಬಾಂದೇಕರ್, ಶಾಸಕ ಸಂಭಾಜಿ ಪಾಟೀಲ ಸೇರಿದಂತೆ ಇತರ ಎಲ್ಲ ಸದಸ್ಯರು ಹಾಗೂ ಅಧಿಕಾರಿಗಳು ಎದ್ದುನಿಂತು ಗೌರವ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT