ಐಐಎಸ್ಇಆರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 
ರಾಜ್ಯ

ಐಐಎಸ್ಇಆರ್ ನಿಂದ ಸಾಮಾಜಿಕ ಆರ್ಥಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಾಮಾಜಿಕ ಆರ್ಥಿಕ ಸುಧಾರಣೆಗಳ ಅಂತಾರಾಷ್ಟ್ರೀಯ ಸಂಸ್ಥೆಯ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಕೊಡಮಾಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಜೂ.24 ರಂದು ನಗರದ ಎಡಿಎ ರಂಗಮಂದಿರದಲ್ಲಿ ಪ್ರದಾನ ಮಾಡಲಾಯಿತು.

ಬೆಂಗಳೂರು: ಸಾಮಾಜಿಕ ಆರ್ಥಿಕ ಸುಧಾರಣೆಗಳ ಅಂತಾರಾಷ್ಟ್ರೀಯ ಸಂಸ್ಥೆಯ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಕೊಡಮಾಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಜೂ.24 ರಂದು ನಗರದ ಎಡಿಎ ರಂಗಮಂದಿರದಲ್ಲಿ ಪ್ರದಾನ ಮಾಡಲಾಯಿತು. 
ಸಾಮಾಜಿಕ ಆರ್ಥಿಕ ಸುಧಾರಣೆಗಳಲ್ಲಿ ಸಾಧನೆ ಮಾಡಿದ ದೇಶದ ವಿವಿಧ ಭಾಗಗಳ 30 ಜನರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನಿಂದ ಪತ್ರಕರ್ತೆ, ನಿರೂಪಕಿ ಸ್ವಾತಿ ಚಂದ್ರಶೇಖರ್, ದಾವಣಗೆರೆಯಿಂದ ಗಂಗಾಧರಯ್ಯ ಹಿರೇಮಠ್, ರೋಣದಿಂದ ಮಹದೇವಪ್ಪ ಹಿರಿಜನ್, ಗುಂಟೂರಿನಿಂದ ಸರಸ್ವತಿ ರಾಜು ಅಯ್ಯರ್ ಸೇರಿದಂತೆ ಒಟ್ಟು 30 ಜನರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ ಮೈಕಾನ್ ನಿರ್ಮಾಣ ಸಂಸ್ಥೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಖರೀದಿ ವಿಭಾಗದ ವ್ಯವಸ್ಥಾಪಕ  ಪುಟ್ಟ ನಾಯ್ಕ್  ಅವರಿಗೂ ಸನ್ಮಾನ ಮಾಡಲಾಯಿತು. 
ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಿರುತೆರೆ, ಸ್ಯಾಂಡಲ್ ವುಡ್ ನಿರ್ದೇಶಕ  ಟಿ.ಎನ್ ಸೀತಾರಾಮ್, ನಟಿ ಭವಾನಿ ಪ್ರಕಾಶ್, ನೀತಿ ಆಯೋಗದಲ್ಲಿ ಆರ್ಥಿಕ ಸಲಹೆಗಾರರಾಗಿರುವ ಡಾ. ಹೆಚ್ ವಿ ಶಿವಪ್ಪ  ಭಾಗಿಯಾಗಿದ್ದರು.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!