ಬೆಂಗಳೂರು: ನಗರದ ಉದ್ಯಮಿಗೆ ವಂಚಿಸಿದ ಪ್ರಕರಣ ಸಂಬಂಧ ತಮಿಳು ನಟ ನಿರ್ದೇಶಕ ಎಸ್.ಶ್ರೀನಿವಾಸ್ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು.
ನವದೆಹಲಿಯ ಉದ್ಯಮಿಯೊಬ್ಬನಿಗೆ ಕಡಿಮೆ ಬಡ್ಡಿ ದರದಲ್ಲಿ ರು. 1.000 ಕೋಟಿ ಸಾಲ ಕೊಡಿಸುವುದಾಗಿ ನಂಬಿಸಿದ್ದರು. ಅವರಿಂದ ಮುಂಗಡವಾಗಿ 10 ಕೋಟಿ ಪಡೆದು, ಬಳಿಕ ತಲೆಮರೆಸಿಕೊಂಡಿದ್ದರು. ಈ ಸಂಬಂಧ ಉದ್ಯಮಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಶ್ರಿನಿವಾಸ್ ಅವರನ್ನು ತಿಹಾರ್ ಜೈಲಿನಲ್ಲಿಡಲಾಗಿತ್ತು.
2013ರಲ್ಲಿ ವಸಂತನಗರದ ಮಸ್ರೂರ್ ಆಲಮ್ ಮತ್ತು ಸಹೋದರ ಸಜ್ಜಾದ್ ಆಲಮ್ ಅವರಿಗೆ ಶ್ರೀನಿವಾಸ್ ಅವರು, ಖಾಸಗಿ ಬ್ಯಾಂಕಿನಲ್ಲಿ ರು. 30 ಕೋಟಿ ಸಾಲ ಕೊಡಿಸುವುದಾಗಿ ನಂಬಿಸಿ 1 ಕೋಟಿ ರು ಮುಂಗಡ ಹಣ ಪಡೆದಿದ್ದರು. ಈ ಸಂಬಂಧ ಆಲಮ್ ಸಹೋದರರು ಹೈಗ್ರೌಂಡ್ಸ್ ಠಾಣೆಗೆ ದೂರು ಕೊಟ್ಟಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ಆರೋಪಿ ಪದೇ ಪದೇ ಗೈರಾಗುತ್ತಿದ್ದರು. ಹೀಗಾಗಿ, 4ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರ ವಿರುದ್ಧ ವಾರಂಟ್ ಜಾರಿ ಮಾಡಿತ್ತು.
ವಂಚನೆ ಪ್ರಕರಣವೊಂದರಲ್ಲಿ ಬಂಧಿಯಾಗಿದ್ದ ಶ್ರೀನಿವಾಸ್ ಅವರು ತಿಹಾರ್ ಜೈಲಿನಲ್ಲಿದ್ದರು. ನ್ಯಾಯಾಲಯದ ಸೂಚನೆಯ ಮೇರೆಗೆ ಅವರನ್ನು ನಗರಕ್ಕೆ ಕರೆತರಲಾಗಿತ್ತು.
ವೃತ್ತಿಯಲ್ಲಿ ವೈದ್ಯರಾಗಿದ್ದ ಅವರು, ನಟನೆಯತ್ತ ಮುಖ ಮಾಡಿದ್ದರು. 12 ತಮಿಳು ಚಿತ್ರಗಳನ್ನು ನಿರ್ದೇಶಿಸಿದ್ದ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಸುಮಾರು 8 ವಂಚನೆ ಕೇಸ್ ಗಳಲ್ಲಿ ಶ್ರೀನಿವಾಸನ್ ವಿರುದ್ಧ ಪ್ರಕರಣ ದಾಖಲಾಗಿದೆ. ಜೂನ್ 2013 ರಲ್ಲಿ ಶ್ರೀನಿವಾಸನ್ ಅವರನ್ನು ಬಂಧಿಸಲಾಗಿತ್ತು. ಆದರೆ ಸೆಪ್ಟಂಬರ್ 2013 ರಂದು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics