ಸಾಂದರ್ಭಿಕ ಚಿತ್ರ 
ರಾಜ್ಯ

ಕಣ್ಣಮುಚ್ಚಾಲೆ ಆಡುತ್ತಿರುವ ಮುಂಗಾರು: ಮತ್ತೊಮ್ಮೆ 'ಬರ'ದ ಆತಂಕದಲ್ಲಿ ರಾಜ್ಯ

ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವ....

ಬೆಂಗಳೂರು: ಮೇ ತಿಂಗಳಲ್ಲಿ  ಸುರಿದ ಪೂರ್ವ ಮುಂಗಾರು ಮಳೆಯಿಂದಾಗಿ ರಾಜ್ಯದ ರೈತರು ತುಸು ನೆಮ್ಮದಿ ಕಾಣುವಂತಾಗಿತ್ತು, ಆದರೆ ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿರುವ ಕಾರಣ ರಾಜ್ಯದಲ್ಲಿ ಮತ್ತೊಮ್ಮೆ ಬರ ಆವರಿಸುವ ಆತಂಕ ಎದುರಾಗಿದೆ.
ಮುಂಗಾರು ಚುರುಕುಗೊಳ್ಳದ ಕಾರಣ ರಾಜ್ಯದ ಹಲವೆಡೆ, ತೀರಾ ಕಡಿಮೆ ಮಳೆಯಾಗಿದೆ. ಹೆಚ್ಚಿನ ಮಳೆ ಬೀಳುವ ಪ್ರಮುಖ ಪ್ರದೇಶಗಳಾದ ಕಾವೇರಿ ಜಲಾನಯನ, ಕೊಡಗು, ಕೇರಳದ ವೈನಾಡಿನಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ತಿಂಗಳಾಂತ್ಯದಲ್ಲಿ ರಾಜ್ಯದ ಅರ್ಧಬಾಗದಲ್ಲಿ ಮಳೆ ಕೊರತೆ ಉಂಟಾಗಿದೆ. 177 ತಾಲೂಕುಗಳಲ್ಲಿ 86 ತಾಲೂಕುಗಳಲ್ಲಿ ಮುಂಗಾರು ಕೊರತೆಯಾಗಿದೆ. 
ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಜೊತೆಗೆ ಸತತವಾಗಿ ಬರಗಾಲ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಲಿದೆ.
ರಾಜ್ಯದ 47 ತಾಲೂಕುಗಳಲ್ಲಿ ಸಾಮಾನ್ಯ ಮಳೆಯಾಗಿದೆ, ಉಳಿದ 100 ತಾಲೂಕುಗಳಲ್ಲಿ ಮಳೆ ಕೊರತೆಎದುರಾಗಿದ್ದು, ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ರಾಜ್ಯ ಪ್ರಾಕತಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ಪರಿಸ್ಥಿತಿ ಸುಧಾರಿಸಿಲ್ಲ, ತೇವಾಂಶ ಕಡಿಮೆಯಾಗಿರುವುದರಿಂದ ಮಳೆಯಾಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ, ಮಾನ್ಸೂನ್ ಕ್ಷೀಣಗೊಂಡಿದೆ ಎಂದು ಕೆಎಸ್ ಎನ್ ಡಿಎಂಸಿ ವಿಜ್ಞಾನಿ ಎಸ್ ಎಸ್ ಎಮ್ ಗವಾಸ್ಕರ್ ಹೇಳಿದ್ದಾರೆ.
ಒಂದು ವೇಳೆ ಮಾನ್ಸೂನ್ ಚುರುಕುಗೊಳ್ಳದಿದ್ದರೇ ಮುಂದಿನ ತಿಂಗಳುಗಳಲ್ಲಿ ಸಮಸ್ಯೆ ಎದುರಾಗಲಿದೆ ಎಂದು ಹೇಳಿದ್ದಾರೆ.
ಕೊಡಗು ಮತ್ತು ವೈನಾಡುಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಕೊಡಗಿನಲ್ಲಿ ಶೇ31 ಹಾಗೂ ವೈನಾಡಿನಲ್ಲಿ ಶೇ.44 ರಷ್ಟು ಪ್ರಮಾಣದಲ್ಲಿ ಮಳೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!