ರಾಜ್ಯ

ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್: ದೇವೇಗೌಡರೊಂದಿಗೆ ಚರ್ಚೆ

Manjula VN
ಬೆಂಗಳೂರು: ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌರ ಅವರನ್ನು ಭೇಟಿಯಾಗಿ ಶನಿವಾರ ಮಾತುಕತೆ ನಡೆಸಿದ್ದಾರೆ. 
ಇಂದು ಬೆಳಿಗ್ಗೆ 9.10ರ ಸುಮಾರಿಗೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಮೀರಾ ಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಸ್ವಾಗತಿಸಿದರು. 
ಇದೇ ವೇಳೆ ದೆಹಲಿಯಿಂದ ನಗರಕ್ಕೆ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗಮಿಸಿದ್ದರು. ವಿಮಾನ ನಿಲ್ದಾಣದ ವಿಐಪಿ ಲಾಂಚ್ ನಲ್ಲಿ ಮೀರಾ ಕುಮಾರ್ ಹಾಗೂ ದೇವೇಗೌಡ ಅವರು ಉಭಯ ಕುಶಲೋಪರಿ ನಡೆಸಿದರು. 
ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ ಮೀರಾಕುಮಾರ್ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ದೇವೇಗೌಡ ಅವರ ಬಳಿ ಮನವಿ ಮಾಡಿಕೊಂಡಲು ಎಂದು ಮೂಲಗಳು ತಿಳಿಸಿವೆ. 
ಜುಲೈ17ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು. ಜು.20ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಹಾರ ರಾಜ್ಯ ಪಾಲ ರಾಮನಾಥ ಕೋವಿಂದ್ ಎನ್ ಡಿಎ ಅಭ್ಯರ್ಥಿಯಾಗಿದ್ದು, ಮೀರಾಕುಮಾರ್ ಅವರು ಯುಪಿಎ ಮಿತ್ರಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಳಿದಿದ್ದಾರೆ. 
SCROLL FOR NEXT