ನಿನ್ನೆ ನಡೆದ 2017-18 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅದಿಕಾರಿಗಳು ಹಾಗೂ ಮಾಧ್ಯಮ ಸಲಹೆಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರ 
ರಾಜ್ಯ

ರೈತರ ಕೃಷಿ ಸಾಲವನ್ನು ಅರ್ಧದಷ್ಟು ಮನ್ನಾ ಮಾಡಿ: ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ

ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಪಡೆದಿರುವ ಕೃಷಿ ಸಾಲದ ಶೇಕಡಾ 50 ರಷ್ಟನ್ನು ಮನ್ನಾ...

ಬೆಂಗಳೂರು: ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಪಡೆದಿರುವ ಕೃಷಿ ಸಾಲದ ಶೇಕಡಾ 50 ರಷ್ಟನ್ನು ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ ಆರು ವರ್ಷಗಳಿಂದ ಸತತವಾಗಿ ಕರ್ನಾಟಕ ಬರಗಾಲಕ್ಕೆ ತುತ್ತಾಗಿದ್ದು, 160 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಉಂಟಾಗಿದೆ. ಸಮಸ್ಯೆ ನಿವಾರಣೆಗೆ ರಾಜ್ಯಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಬೆಳೆನಷ್ಟದಿಂದ ರೈತರು ಬ್ಯಾಂಕ್ ಹಾಗೂ ಸಹಕಾರಿ ಸಂಘಗಳಲ್ಲಿ ಪಡೆದಿರುವ ಸಾಲವನ್ನು ತೀರಿಸಲಾಗದಂತಹ ಪರಿಸ್ಥಿತಿ ಎದುರಾಗಿದೆ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
ಬಹುತೇಕ ರೈತರು ವಾಣಿಜ್ಯ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಸಾಲ ಪಡೆದಿದ್ದು, ಕೇಂದ್ರ ಸರ್ಕಾರ ಶೇಕಡಾ 50 ರಷ್ಟು ಕೃಷಿ ಸಾಲಮನ್ನಾ ಮಾಡಿದರೆ, ರಾಜ್ಯ ಸರ್ಕಾರ ಉಳಿದ ಶೇಕಡಾ 50ರಷ್ಟು ಕೃಷಿ ಸಾಲವನ್ನು ಮನ್ನಾ ಮಾಡಲು ಸಿದ್ಧವಿದೆ ಎಂದು ಅವರು  ಪತ್ರದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ