ಶಿವಮೊಗ್ಗ: ಕಳೆದ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ನಟ ಶಿವರಾಜಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಅವರನ್ನು ಶಿವಮೊಗ್ಗ ಮೂರನೇ ಜೆಎಂಎಫ್‌ಸಿ ಕೋರ್ಟ್ ಶನಿವಾರ ಖುಲಾಸೆಗೊಳಿಸಿದೆ.
ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶೆ ಶ್ವೇತಾ ಅವರು, ಸಾಕ್ಷ್ಯಾಧಾರಗಳ ಕೊರೆತೆ ಹಿನ್ನೆಲೆಯಲ್ಲಿ ಈ ಮೂವರು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪವನ್ನು ಕೈಬಿಟ್ಟಿದ್ದಾರೆ.
2014ರ ಏಪ್ರಿಲ್ 16ರಂದು ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಅವರು ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಶಿವಮೊಗ್ಗ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಶಿವರಾಜ್ ಕುಮಾರ್ ದಂಪತಿ ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics