ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ಹಿಸುತ್ತಿದ್ದ ಪೇದೆಯೊಬ್ಬರು ಪೊಲೀಸ್ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.
ಪ್ರಸಾದ್(30) ಆತ್ಮಹತ್ಯೆ ಮಾಡಿಕೊಂಡ ಪೇದೆ. ಪ್ರಸಾದ್ಗೆ ತಮ್ಮ ಸಹೋದ್ಯೋಗಿಗಳು ಕರೆ ಮಾಡಿದ್ದಾರೆ. ಈ ವೇಳೆ ಯಾವುದೇ ಕರೆಯನ್ನು ಸ್ವೀಕರಿಸಿದ ಕಾರಣ ಅನುಮಾನಗೊಂಡು ವಸತಿ ಗೃಹದ ಬಳಿ ಬಂದು ಬಾಗಿಲು ಒಡೆದು ನೋಡಿದಾಗ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೂಲತಃ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯವರಾದ ಪ್ರಸಾದ್ 2008 ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು,. ಮೊದಲು ಯಳಂದೂರು ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ ನಂತರ ಇತ್ತೀಚೆಗೆ ಬೇಗೂರು ಠಾಣೆಗೆ ವರ್ಗಾವಣೆ ಗೊಂಡಿದ್ದರು.
ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ ಪ್ರಸಾದ್ ಗೆ ಒಂದು ಹೆಣ್ಣುಮಗು ಇದೆ. ಪ್ರಸಾದ್ ಆತ್ಮಹತ್ಯೆಗೆ ಹಿರಿಯ ಅಧಿಕಾರಿಗಳ ಕಿರುಕುಳ ಕಾರಣ ಎಂದು ಆರೋಪಿಸಿ ಮೃತ ಪೇದೆ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಪ್ರಸಾದ್ ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದು ಬಂದಿಲ್ಲ ಎಂದು ಬೇಗೂರು ಸಬ್ ಇನ್ಸ್ ಪೆಕ್ಟರ್ ಕಿರಣ್ ಕುಮಾರ್ ಹೇಳಿದ್ದಾರೆ