ಮಂಗಳಾ ಶ್ರೀಧರ್ 
ರಾಜ್ಯ

ಕೆಪಿಎಸ್ ಸಿ ಸದಸ್ಯೆ ಮಂಗಳಾ ಶ್ರೀಧರ್ ವಿರುದ್ಧದ ಅಮಾನತು ಆದೇಶ ವಜಾಗೊಳಿಸಿದ ಹೈಕೋರ್ಟ್

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯೆ ಮಂಗಳಾ ಶ್ರೀಧರ್ ಅವರ ಅಮಾನತು ಆದೇಶವನ್ನು ಹೈಕೋರ್ಟ್‌ ವಜಾ ಮಾಡಿದೆ. ಈ ಸಂಬಂಧ...

ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯೆ ಮಂಗಳಾ ಶ್ರೀಧರ್ ಅವರ ಅಮಾನತು ಆದೇಶವನ್ನು ಹೈಕೋರ್ಟ್‌ ವಜಾ ಮಾಡಿದೆ. ಈ ಸಂಬಂಧ ರಾಜ್ಯಪಾಲರ ಆದೇಶ ಸಂವಿಧಾನಬಾಹಿರ ಎಂದು ಅಭಿಪ್ರಾಯಪಟ್ಟಿದೆ.

2014ರಲ್ಲಿ ರಾಜ್ಯಪಾಲರ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಕ್ರಮ ಪ್ರಶ್ನಿಸಿ ಮಂಗಳಾ ಶ್ರೀಧರ್‌ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯ ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ, ರಾಜ್ಯಪಾಲರ ಆದೇಶ ಹಾಗೂ ಏಕಸದಸ್ಯ ಪೀಠದ ತೀರ್ಪು ರದ್ದುಪಡಿಸಿ, ಮಂಗಳಾ ಶ್ರೀಧರ್ ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅರ್ಹರಿದ್ದಾರೆ ಎಂದು ತಿಳಿಸಿದೆ.

ಕೆಪಿಎಸ್‌ಸಿ ಸದಸ್ಯೆಯಾಗಿದ್ದ ಮಂಗಳಾ ಶ್ರೀಧರ್ ಅವರು 2011ರ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಎ ಮತ್ತು ಬಿ ವೃಂದದ 362 ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು. ಈ ದೂರಿಗೆ ಸಂಬಂಧಿಸಿದಂತೆ  ಮಂಗಳಾ ಶ್ರೀಧರ್ ಅವರನ್ನು ಅಮಾನತುಗೊಳಿಸಿ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಆದೇಶಿಸಿದ್ದರು.

ಕೆಪಿಎಸ್‌ಸಿ ಸದಸ್ಯ ಸ್ಥಾನದಿಂದ ಅಮಾನತುಗೊಳಿಸುವ ಅಧಿಕಾರ ರಾಜ್ಯಪಾಲರಿಗಿಲ್ಲ.ಅಲ್ಲದೆ ಅಮಾನತುಗೊಳಿಸುವ ಮುನ್ನ ಸಚಿವ ಸಂಪುಟದ ತೀರ್ಮಾನವೂ ನಡೆದಿರಲಿಲ್ಲ. ಜತೆಗೆ ಅಮಾನತುಗೊಳಿಸಿದ ಆದೇಶ­ವನ್ನು ರಾಷ್ಟ್ರ­ಪತಿಗೆಗೆ ಕಳುಹಿಸಿಕೊಡಬೇಕು, ಈ ಸಂಬಂಧ ರಾಷ್ಟ್ರ­ಪತಿ ಸುಪ್ರೀಂಕೋರ್ಟ್‌ಗೆ ಶಿಫಾರಸು ಕಳುಹಿಸಿಕೊಡಬೇಕು. ಆದರೆ ಇದುವರೆಗೂ ಈ ಪ್ರಕ್ರಿ­ಯೆಗಳು ಪಾಲನೆಯಾಗಿಲ್ಲ ಎಂದು ಅಭಿ­ಪ್ರಾಯಪಟ್ಟ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!