ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲಾ ಶುಲ್ಕ ಪಾವತಿ ಮಾಡಲಿಲ್ಲ ಎಂದು ಬಾಲಕನಿಗೆ ಥಳಿತ!

ಶಾಲಾ ಶುಲ್ಕವನ್ನು ಪಾವತಿಸಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಬಾಲಕನೋರ್ವನನ್ನು ಥಳಿಸಲಾಗಿದೆ ಎಂಬ ಗಂಭೀರ ಆರೋಪ ಪ್ರತಿಷ್ಟಿತ ಶಾಲೆ ವಿರುದ್ಧ ಕೇಳಿಬಂದಿದೆ.

ಬೆಂಗಳೂರು: ಶಾಲಾ ಶುಲ್ಕವನ್ನು ಪಾವತಿಸಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಬಾಲಕನೋರ್ವನನ್ನು ಥಳಿಸಲಾಗಿದೆ ಎಂಬ ಗಂಭೀರ ಆರೋಪ ಪ್ರತಿಷ್ಟಿತ ಶಾಲೆ ವಿರುದ್ಧ ಕೇಳಿಬಂದಿದೆ.

ಬಾಲಕನ ಪೋಷಕರು ಈ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಲಾ ಶುಲ್ಕ ಪಾವತಿ ತಡವಾಗಿದ್ದಕ್ಕೇ ಫೆಬ್ರವರಿ 27ರಂದು ತಮ್ಮ ಪುತ್ರನನ್ನು ಶಾಲಾ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿದ್ದಾರೆ. ಇದರಿಂದ  ಬಾಲಕ ಮಾನಸಿಕ ಮತ್ತು ದೈಹಿಕವಾಗಿ ಜರ್ಜಿರಿತನಾಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಅಂತೆಯೇ ಕೇವಲ ತಮ್ಮ ಪುತ್ರ ಮಾತ್ರವಲ್ಲದೇ ಶಾಲೆಯ ಇತರೆ ವಿದ್ಯಾರ್ಥಿಗಳೊಂದಿಗೂ ಸಿಬ್ಬಂದಿ ಇದೇ ರೀತಿ ಕ್ರೂರವಾಗಿ  ವರ್ತಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ದೂರಿನಲ್ಲಿ ಬಾಲಕನ ಮೇಲೆ ದೈಹಿಕ ಮತ್ತು ಮಾನಸಿಕ ಹಲ್ಲೆಯಾಗಿದ್ದು, ಈ ಬಗ್ಗೆ ದೂರಿನಲ್ಲಿ ವೈದ್ಯಕೀಯ ವರದಿಗಳನ್ನು ಕೂಡ ಸಲ್ಲಿಸಲಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ಪ್ರಸ್ತುತ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ  ಸಂಬಂಧ ಸ್ಪಷ್ಟನೆ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ. ಇನ್ನು ಪೋಷಕರ ಆರೋಪವನ್ನು ಶಾಲಾ ಆಡಳಿತ ಮಂಡಳಿ ಸಿಬ್ಬಂದಿ ನಿರಾಕರಿಸಿದ್ದು, ದೂರಿನ ವಿರುದ್ಧ ತಾವು ಕಾನೂನಾತ್ಮಕವಾಗಿಯೇ  ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸದ ವಿದ್ಯಾರ್ಥಿಗಳನ್ನು ಥಳಿಸುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT