ರಾಜ್ಯ

ಹೊಸ ಮಾದರಿಯಲ್ಲಿ ಹತ್ತನೇ ತರಗತಿ ಪರೀಕ್ಷೆ: ಮಂಡಳಿ

Sumana Upadhyaya
ಬೆಂಗಳೂರು: ಪ್ರಸಕ್ತ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಹೊಸ ಮಾದರಿಯಲ್ಲಿ ನಡೆಸಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಗೊಂದಲಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಈ ವರ್ಷ ಹತ್ತನೇ ತರಗತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಬುಕ್ ಲೆಟ್ ಗಳನ್ನು ಪ್ರತ್ಯೇಕವಾಗಿ ಮುದ್ರಿಸಿ ಅಭ್ಯರ್ಥಿಗಳಿಗೆ ವಿತರಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಯಲ್ಲಿನ ವಿನ್ಯಾಸ, ಪ್ರತಿ ವಿಷಯದ ಘಟಕಗಳಿಗೆ ನಿಗದಿಪಡಿಸಿದ ಅಂಕಗಳು, ಉತ್ತರಿಸಲು ನಿಗದಿಪಡಿಸಿದ ಸಮಯ ಇವುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಪರೀಕ್ಷೆಗಳು ನಡೆಯಲಿವೆ.
SCROLL FOR NEXT