ಸಾಂದರ್ಭಿಕ ಚಿತ್ರ 
ರಾಜ್ಯ

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ರೈಲ್ವೇ ಹಳಿಯಲ್ಲಿ ಬಿರುಕು ಕಂಡ ಬಂದ ಹಿನ್ನಲೆಯಲ್ಲಿ ರೈಲು ಚಾಲಕ ರೈಲನ್ನು ನಿಲ್ಲಿಸಿ ಆಗಬಹುದಾಗಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿರುವ ಘಟನೆ ಕರ್ನಾಟಕದ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ: ರೈಲ್ವೇ ಹಳಿಯಲ್ಲಿ ಬಿರುಕು ಕಂಡ ಬಂದ ಹಿನ್ನಲೆಯಲ್ಲಿ ರೈಲು ಚಾಲಕ ರೈಲನ್ನು ನಿಲ್ಲಿಸಿ ಆಗಬಹುದಾಗಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿರುವ ಘಟನೆ ಕರ್ನಾಟಕದ ವಿಜಯಪುರದಲ್ಲಿ ನಡೆದಿದೆ.

ಸೊಲ್ಲಾಪುರದರಿಂದ ಹುಬ್ಬಳ್ಳಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ರೈಲು ದುರಂತವೊಂದು ತಪ್ಪಿದ್ದು, ರೈಲು ಹಳಿ ಬಿರುಕು ಸರಿಪಡಿಸಿದ ಬಳಿಕ ರೈಲು ಪ್ರಯಾಣ ಮುಂದುವರೆಸಿದೆ.  ವಿಜಯಪುರದ ಅಲಿಯಾಬಾದ್ ಬಳಿ ಹಳಿಯಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ ಚಾಲಕ ತಕ್ಷಣ ರೈಲನ್ನು ನಿಲ್ಲಿಸಿ, ಆಗಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಿದ್ದಾನೆ. ಅಲ್ಲದೆ ಕೂಡಲೇ ರೈಲ್ವೇ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ  ರೈಲು ಹಳಿ ಸರಿಪಡಿಸುವಂತೆ ಮಾಹಿತಿ ನೀಡಿದ್ದಾನೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ರೈಲ್ವೆ ಇಲಾಖೆ ಸಿಬ್ಬಂದಿ ಹಳಿಯನ್ನು ದುರಸ್ಥಿಗೊಳಿಸಿ ರೈಲು ಚಲಿಸಲು ಅನುವು ಮಾಡಿಕೊಟ್ಟರು. ಈ ಘಟನೆಯಿಂದಾ ಈ ಮಾರ್ಗದಲ್ಲಿ 45 ನಿಮಿಷ ತಡವಾಗಿ ರೈಲು ಪ್ರಯಾಣ  ಮುಂದುವರೆಯಿತು. ಹಳಿ ದುರಸ್ಥಿ ಕಾರ್ಯ ಪೂರ್ಣ ಗೊಂಡಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರ ಸುಗಮವಾಗಿ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶ್ಲಾಘನೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ