ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ರಮೇಶ್ ಇಂದು ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮಾರ್ಚ್ 9ರಂದು ಸಂಭಿಸಿದ್ದ ಈ ದುರಂತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರು. ಸೆಕ್ಯುರಿಟಿ ಗಾರ್ಡ್ ರಮೇಶ್ ಹಾಗೂ ಇನ್ನೋರ್ವ ವಿದ್ಯಾರ್ಥಿ ಸುದರ್ಶನ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ್ದ ಶಾಂತಮೂರ್ತಿ, ಆಕಾಂಕ್ಷ ಪಲ್ಲಕ್ಕಿ ಮತ್ತು ಶ್ರೇಯಸ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ರಮೇಶ್ ಅವರು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.