ಪುತ್ತೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರಯಾಣಿಸುತ್ತಿದ್ದ ಕಾರು ಪುತ್ತೂರಿನ ಉರ್ಲಾಂಡಿ ಸಮೀಪ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಸೊರಕೆ ಅವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಸೊರಕೆ ಅವರ ಕಾರು ಹಾಗೂ ಮಾರುತಿ ಒಮ್ನಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ತೀವ್ರ ಜಖಂಗೊಂಡಿದೆ.