ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಹಾಗೂ ಮಧ್ಯ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನೆದರ್ಲೆಂಡ್ ನ ಆ್ಯಮ್ ಸ್ಟರ್ಡ್ಯಾಮ್ ನಲ್ಲಿ ನಡೆದ ವಿಶ್ವದ ಏರ್‍ಪೋರ್ಟ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ. ಸ್ಕೈಟ್ರಾಕ್ಸ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ನಿನ್ನೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡು ಮತ್ತೊಂದು ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ರೆಡ್ಡಿ ಹೇಳಿದ್ದಾರೆ.
ಪ್ರಯಾಣಿಕರ ಅಭಿಪ್ರಾಯ ಪಡೆದು ಸಮೀಕ್ಷೆ ನಡೆಸಿ 2017ರ ಏರ್‍ಪೋರ್ಟ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಜುಲೈ 2016ರಿಂದ 2017ರವರೆಗೆ ಜಗತ್ತಿನ 550 ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಭವವನ್ನು ಸಂಗ್ರಹಿಸಿ ಈ ಸಮೀಕ್ಷೆ ಮಾಡಲಾಗಿದೆ. ಚೆಕ್ ಇನ್, ಅರೈವಲ್, ಟ್ರಾನ್ಸ್ ಫರ್, ಶಾಪಿಂಗ್, ಸೆಕ್ಯೂರಿಟಿ, ಇಮಿಗ್ರೇಶನ್ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos