ಸಂಗ್ರಹ ಚಿತ್ರ 
ರಾಜ್ಯ

ನನ್ನ ಮೇಲೆ ಹಲ್ಲೆ ಮಾಡಿದ್ದು ಇವನೇ: ಎಟಿಎಂ ದಾಳಿಕೋರನ ಗುರುತಿಸಿದ ಜ್ಯೋತಿ ಉದಯ್

ನಗರದ ಎನ್ ಆರ್ ವೃತ್ತದಲ್ಲಿರುವ ಕಾರ್ಪೊರೇಷನ್‌ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಮಧುಕರ್ ರೆಡ್ಡಿ ಅಲಿಯಾಸ್ ಮದನ್ ರೆಡ್ಡಿಯನ್ನು ಸಂತ್ರಸ್ತೆ ಜ್ಯೋತಿ ಉದಯ್ ಅವರು ಗುರುತಿಸಿದ್ದಾರೆ.

ಬೆಂಗಳೂರು: ನಗರದ ಎನ್ ಆರ್ ವೃತ್ತದಲ್ಲಿರುವ ಕಾರ್ಪೊರೇಷನ್‌ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಮಧುಕರ್ ರೆಡ್ಡಿ ಅಲಿಯಾಸ್ ಮದನ್ ರೆಡ್ಡಿಯನ್ನು  ಸಂತ್ರಸ್ತೆ ಜ್ಯೋತಿ ಉದಯ್ ಅವರು ಗುರುತಿಸಿದ್ದಾರೆ.

ಪ್ರಕರಣ ಸಂಬಂಧ ಶುಕ್ರವಾರ ಆರೋಪಿ ಮಧುಕರ್‌ ರೆಡ್ಡಿಯನ್ನು 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿಯ ಗುರುತು ಪತ್ತೆಗೆ ಪರೇಡ್‌ ಸಹ ನಡೆಯಿತು. ನ್ಯಾಯಾಲಯಕ್ಕೆ ಬಂದಿದ್ದ  ದೂರುದಾರರಾದ ಜ್ಯೋತಿ ಉದಯ್ ಅವರು ನ್ಯಾಯಾಧೀಶರು ಹಾಗೂ ತಹಸೀಲ್ದಾರ್‌ ಅವರ ಎದುರೇ ಆರೋಪಿಯನ್ನು  ಗುರುತಿಸಿದರು. ಅಂದು ತಮ್ಮ ಮೇಲೆ ನಡೆದ ಭೀಕರ ಹಲ್ಲೆ ನಡೆಸಿದ್ದು, ಈತನೇ ಎಂದು ಖುದ್ಧ ಜ್ಯೋತಿ  ಉದಯ್ ಹೇಳಿದ್ದಾರೆ. ಜ್ಯೋತಿ ಉದಯ್ ಅವರ ಗುರುತು ಪತ್ತೆ ಬಳಿಕೆ ಆರೋಪಿ ರೆಡ್ಡಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶದ ಜೈಲಿನಿಂದ ರೆಡ್ಡಿಯನ್ನು  ಕರೆದುಕೊಂಡು ಬಂದಿದ್ದ ಎಸ್‌.ಜೆ.ಪಾರ್ಕ್‌ ಠಾಣೆಯ ಪೊಲೀಸರು ನ್ಯಾಯಾಲಯದ ಅನುಮತಿಯಂತೆ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆ ಬಹುತೇಕ  ಮುಕ್ತಾಯವಾಗಿದ್ದರಿಂದ ಶುಕ್ರವಾರ ಪುನಃ ಆರೋಪಿಯನ್ನು ನ್ಯಾಯಾಲಯಕ್ಕೆ  ಹಾಜರುಪಡಿಸಿದರು."ಆರೋಪಿಯನ್ನು  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದೇವೆ.  ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ  ಸಿದ್ಧಪಡಿಸುತ್ತಿದ್ದು,  ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ" ಎಂದು ಹಿರಿಯ ಅಧಿಕಾರಿ ತಿಳಿಸಿದರು.

ಕಳೆದ ಜನವರಿ 31ರ ರಾತ್ರಿ ಆಂಧ್ರಪ್ರದೇಶದ ನಲ್ಲಪಲ್ಲಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮಧುಕರ್‌ ರೆಡ್ಡಿಯನ್ನು ಅಲ್ಲಿಯ ಪೊಲೀಸರು ಬಂಧಿಸಿದ್ದರು. ಆತನೇ ಬೆಂಗಳೂರಿನ ಎಟಿಎಂನಲ್ಲಿ ಜ್ಯೋತಿ ಅವರ ಮೇಲೆ ಹಲ್ಲೆ   ಮಾಡಿದ್ದ ಆರೋಪಿ ಎಂಬುದು ಬಳಿಕ ಗೊತ್ತಾಗಿತ್ತು.ಜತೆಗೆ ಆತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ವಶಕ್ಕೆ ಪಡೆದ ಪೊಲೀಸರು ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರ ವಶಕ್ಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!