ಪ್ರತಿಭಟನಾಕಾರರು 
ರಾಜ್ಯ

ಸಿಎಂ ಸಭೆ ವಿಫಲ: ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವೇತನ ಹೆಚ್ಚಳ ಬೇಡಿಕೆ ಈಡೇರುವವರೆಗೆ ತಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಅಂಗನವಾಡಿ ...

ಬೆಂಗಳೂರು: ವೇತನ ಹೆಚ್ಚಳ ಬೇಡಿಕೆ ಈಡೇರುವವರೆಗೆ ತಮ್ಮ  ಪ್ರತಿಭಟನೆ ನಿಲ್ಲಿಸುವುದಿಲ್ಲ  ಎಂದು ಅಂಗನವಾಡಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಕೈಬಿಡದಿರಲು ನಿರ್ಧರಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಸಂಘದ ಮುಖಂಡರ ಜೊತೆ ನಡೆಸಿದ ಮಾತುಕತೆ ವೇಳೆ ಯಾವುದೇ ನಿರ್ಧಾರಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ.

ಮುಂದಿನ ತಿಂಗಳು 19ರಂದು ಸಭೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷಿಗೆ ಭರವಸೆ ನೀಡಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ವಾಪಸ್ ಇಲ್ಲ ಎಂದು ಸಂಘದ ಮುಖ್ಯಸ್ಥೆ ವರಲಕ್ಷಿ ಘೋಷಿಸಿದ್ದಾರೆ.

ಇನ್ನೊಂದೆಡೆ ಇಂದು ಸದನದಲ್ಲಿ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಕರ್ತರಿಗೆ ಸಂಭಾವನೆ ಹೆಚ್ಚಿಸಬೇಕಾದರೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದು ಕೇಂದ್ರ ಸರ್ಕಾರದ ಅನುದಾನ ಕಾರ್ಯಕ್ರಮವಾದರೂ ಕಳೆದ ವರ್ಷ ಅನುದಾನವನ್ನು ಶೇಕಡ ೯೦ರಿಂದ ೪೦ಕ್ಕೆ ಇಳಿಸಿದೆ ಎಂದು ಅವರು ತಿಳಿಸಿದರು. ಆದರೂ ಸಹ ಸರ್ಕಾರ ಅನೇಕ ವರ್ಷಗಳಿಂದ ಸಂಭಾವನೆಯನ್ನು ಹೆಚ್ಚಿಸುತ್ತಲೇ ಬಂದಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ನ್ಯಾಯಯುತವಾಗಿದೆ; ಅದನ್ನು ಈಡೇರಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

ಈ ಬಗ್ಗೆ ಸದನಕ್ಕೆ ಹೇಳಿಕೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಉಮಾಶ್ರೀ, ಅಂಗನವಾಡಿ ಕಾರ್ಯಕರ್ತರಿಗೆ ಮಾಸಿಕ 7 ಸಾವಿರ ರೂಪಾಯಿ ಸಂಭಾವನೆ ನೀಡಲಾಗುತ್ತಿದೆ. ಇದನ್ನು 10 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಅವರು ಬೇಡಿಕೆ ಸಲ್ಲಿಸಿದ್ದಾರೆ ಎಂದರು. ಅಂಗನವಾಡಿ ಕಾರ್ಯಕರ್ತರಿಗೆ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳು ತಕ್ಷಣ ಎಲ್ಲಾ ಕ್ರಮ ಕೈಗೊಳ್ಳುತ್ತಾರೆ ಎಂದು ಆಶ್ವಾಸನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel