ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಂದು ಹೇಳಿಕೊಂಡು ತಮ್ಮ ಫೇಸ್ ಬುಕ್ ಪುಟದಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿಕೊಂಡ ಮಹಿಳೆ ವಿರುದ್ಧ ಬೆಂಗಳೂರು ಪೊಲೀಸರು ಅಪರಾಧ ಕೇಸು ದಾಖಲಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಸದಸ್ಯರು ನೀಡಿದ ದೂರಿನ ಮೇರೆಗೆ ಮಹಿಳೆ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಅಪರಾಧ) ಎಸ್.ರವಿ ತಿಳಿಸಿದ್ದಾರೆ.
ಪ್ರಭಾ ಎನ್ ಬೆಳವಂಗಳ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಂದು ಹೇಳಿಕೊಂಡು ಮಹಿಳೆಯೊಂದಿಗಿರುವ ಅಸಭ್ಯ ಫೋಟೋಗಳನ್ನು ಹಾಕಿ ಅಶ್ಲೀಲವಾಗಿ ಬರೆದು ಪೋಸ್ಟ್ ಮಾಡಿದ್ದರು. ಇದು ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಹರಿದಾಡಿ ಭಾರೀ ಸದ್ದು ಮಾಡಿತ್ತು. ಇದರ ವಿರುದ್ಧ ಬಿಜೆಪಿ ಯುವ ಮೋರ್ಚಾ ಸದಸ್ಯರು ದೂರು ನೀಡಿದ್ದು, ಎಫ್ ಐಆರ್ ದಾಖಲಿಸಲಾಗಿದೆ ಎಂದು ರವಿ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಅಶ್ಲೀಲ ಮತ್ತು ತಿದ್ದುಪಡಿ ಮಾಡಿದ ಚಿತ್ರಗಳನ್ನು ಪೋಸ್ಟ್ ಮಾಡಲಾಗಿದ್ದು, ಇದು ಯೋಗಿ ಆದಿತ್ಯನಾಥ್ ಅವರ ವ್ಯಕ್ತಿತ್ವವನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡಲು ಆಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಮಾನನಷ್ಟ, ಧರ್ಮದ ಆಧಾರದ ಮೇಲೆ ದ್ವೇಷವನ್ನು ಪ್ರಚಾರ ಮಾಡುವ ಮಾಹಿತಿ ತಂತ್ರಜ್ಞಾನ ಕಾಯಿದೆ 2000ದ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿ ಗೌಡ, ಯೋಗಿ ಆದಿತ್ಯನಾಥರ ವ್ಯಕ್ತಿತ್ವವನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡಲು ತಿದ್ದುಪಡಿ ಮಾಡಿ ಫೇಸ್ ಬುಕ್ ನಲ್ಲಿ ಪ್ರಭಾ ಅವರು ಫೋಟೋ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಧಕ್ಕೆ ತರುವ ರೀತಿಯಲ್ಲಿ ಈ ಹಿಂದೆ ಕೂಡ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics