ಸಾಂದರ್ಭಿಕ ಚಿತ್ರ 
ರಾಜ್ಯ

ಮೇಕೆ ಕದಿಯಲು ಯತ್ನ ಆರೋಪ: ತುಮಕೂರಿನಲ್ಲಿ ದಲಿತ ವ್ಯಕ್ತಿಗೆ ಥಳಿಸಿ ಹತ್ಯೆ

ಮೇಕೆ ಕದಿಯಲು ಯತ್ನಿಸಿದನೆಂಬ ಆರೋಪದ ಮೇಲೆ ಹಲ್ಲೆ ಮಾಡಿದ ಪರಿಣಾಮ ವ್ಯಕ್ತಿಯೋರ್ವ ಮೃತ ಪಟ್ಟಿರುವ ಘಟನೆ ತುಮಕೂರಿನಲ್ಲಿ ...

ತುಮಕೂರು: ಮೇಕೆ ಕದಿಯಲು ಯತ್ನಿಸಿದನೆಂಬ ಆರೋಪದ ಮೇಲೆ ಹಲ್ಲೆ ಮಾಡಿದ ಪರಿಣಾಮ ವ್ಯಕ್ತಿಯೋರ್ವ ಮೃತ ಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ಜೋಗೇನಹಳ್ಳಿಯಲ್ಲಿ ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಕೃಷ್ಣಪ್ಪ ಎಂಬಾತ ಸಾವನ್ನಪ್ಪಿದ್ದಾನೆ. ಕೃಷ್ಣಪ್ಪ ಆಂಧ್ರ ಪ್ರದೇಶದ ಮಡಕಾ ಶಿರಾ ತಾಲೂಕಿನ ಮಣ್ಣೂರು ಗ್ರಾಮದವನು ಎಂದು ಗುರುತಿಸಲಾಗಿದೆ.

ಈ ಸಂಬಂಧ ರಾಮರೆಡ್ಡಿ  ಆತನ ಮಗ ಬಾಬು ಮತ್ತು ನಾಗರಾಜ ಎಂಬುವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಕಷ್ಣಪ್ಪ ಮೂವರ ಜೊತೆ ಬೆಳಗಿನ 3 ಗಂಟೆ ವೇಳೆಗೆ ಮೇಕೆ ಕದಿಯಲು ರಾಮರೆಡ್ಡಿ ಮನೆಗೆ ಬಂದಿದ್ದ. ಈ ವೇಳೆ ಎಚ್ಚರಗೊಂಡ ರಾಮರೆಡ್ಡಿ ಮತ್ತಿತ್ತರು ಹೊರ ಬಂದು ನೋಡಿದಾಗ, ಕೃಷ್ಣಪ್ಪ ಮೇಕೆಯನ್ನು ಎಳೆದೊಯ್ಯುತ್ತಿದ್ದದ್ದು ಕಂಡು ಬಂತು.

ಅಪಾಯವನ್ನರಿತ ಕೃಷ್ಣಪ್ಪ ಜೊತೆ ಬಂದಿದ್ದ ಮತ್ತಿಬ್ಬರು ಪರಾರಿಯಾದರು. ಆದರೆ ಕೃಷ್ಣಪ್ಪ ಕತ್ತಲೆಯಲ್ಲಿ ಸಿಕ್ಕಿಬಿದ್ದ. ಮೂವರು ಕೃಷ್ಣಪ್ಪನನ್ನು ಮರಕ್ಕೆ ಕಟ್ಟಿ ಮರದ ತುಂಡುಗಳಿಂದ ಥಳಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಬಂದ ಮಧುಗಿರಿ ಪೊಲೀಸ್ ಇನ್ಸ್ ಪೆಕ್ಟರ್ ನರಸಿಂಹ ಮೂರ್ತಿ ಶವವನ್ನು ವಶಕ್ಕೆ ಪಡೆದಿದ್ದಾರೆ. ಕೃಷ್ಣಪ್ಪ ಸಂಬಂಧಿಕರು ಹಾಗೂ ಕೆಲವು ದಲಿತ ಮುಖಂಡರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊಡಿಗೆನಹಳ್ಳಿ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!