ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರೀತಿಗೆ ನಿರಾಕರಣೆ: 7ನೇ ಕ್ಲಾಸ್ ಹುಡುಗಿಯನ್ನು 3ನೇ ಮಹಡಿಯಿಂದ ತಳ್ಳಿದ ಬಾಲಕ

ಪ್ರೀತಿಗೆ ನಿರಾಕರಿಸಿದ ಕಾರಣಕ್ಕೆ ಏಳನೇ ತರಗತಿಯ ವಿದ್ಯಾರ್ಥಿನಿಯನ್ನು 9ನೇ ತರಗತಿಯ ಬಾಲಕನೊಬ್ಬ ಶಾಲೆಯ 3ನೇ ಮಹಡಿಯಿಂದ ಕಳೆಗೆ ತಳ್ಳಿರುವ ಘಟನೆಯೊಂದು ಮಂಡ್ಯದ ವಿಶ್ವಮಾನ ಶಾಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಮಂಡ್ಯ: ಪ್ರೀತಿಗೆ ನಿರಾಕರಿಸಿದ ಕಾರಣಕ್ಕೆ ಏಳನೇ ತರಗತಿಯ ವಿದ್ಯಾರ್ಥಿನಿಯನ್ನು 9ನೇ ತರಗತಿಯ ಬಾಲಕನೊಬ್ಬ ಶಾಲೆಯ 3ನೇ ಮಹಡಿಯಿಂದ ಕಳೆಗೆ ತಳ್ಳಿರುವ ಘಟನೆಯೊಂದು ಮಂಡ್ಯದ ವಿಶ್ವಮಾನ ಶಾಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 
ಘಟನೆಯಲ್ಲಿ ವಿದ್ಯಾರ್ಥಿನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
9ನೇ ತರಗತಿ ವಿದ್ಯಾರ್ಥಿ ತನ್ನದೇ ಶಾಲೆಯಲ್ಲಿ ಓದುತ್ತಿದ್ದ 7ನೇ ತರಗತಿಯ ವಿದ್ಯಾರ್ಥಿಯನ್ನು ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದ. ಹಲವು ಬಾರಿ ಆಕೆಗೆ ತನ್ನ ಪ್ರೀತಿ ನಿವೇದನೆಯನ್ನು ಮಾಡಿಕೊಂಡಿದ್ದ. ಆದರೆ, ಬಾಲಕಿ ಇದನ್ನು ನಿರಾಕರಿಸಿದ್ದಳು. 
ಬಾಲಕ ಕಿರುಕುಳ ನೀಡುತ್ತಿದ್ದಾನೆಂದು ಬಾಲಕಿ ಹಲವು ಬಾರಿ ಶಾಲೆಯ ಮುಖ್ಯಸ್ಥರಿಗೆ ದೂರು ನೀಡಿದ್ದರೂ, ಮುಖ್ಯಸ್ಥರು ಈ ಬಗ್ಗೆ ಕ್ರಮ ಕೈಗೊಂಡಿಲ್ಲ. 
ಮಾರ್ಚ್. 16 ರಂದು ಬಾಲಕ ಬಾಲಕಿಯನ್ನು ಬಲವಂತದಿಂದ ಶಾಲಾ ಕಟ್ಟಡ 3ನೇ ಮಹಡಿಗೆ ಕರೆದೊಯ್ದಿದ್ದಾನೆ. ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ತಿಳಿಸಿದ್ದಾನೆ. ಈ ವೇಳೆ ಬಾಲಕಿ ನಿರಾಕರಿಸಿದ್ದಾಳೆ. ಕೂಡಲೇ ತೀವ್ರ ಕೆಂಡಾಮಂಡಲವಾಗಿರುವ ಬಾಲಕ ಆಕೆಯನ್ನು ಮಹಡಿಯಿಂದ ಕೆಳಗೆ ತಳ್ಳಿದ್ದಾನೆಂದು ತಿಳಿದುಬಂದಿದೆ. 
ಕಟ್ಟಡದಿಂದ ಬಿದ್ದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಬಾಲಕಿಯ ಹಲವು ಹಲ್ಲುಗಳು ಮುರಿದುಹೋಗಿವೆ. ವೈದ್ಯರು ಇದೀಗ ಬಾಲಕಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿದ್ದಾರೆ. ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಾರ್ಚ್ 23 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.  
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕನನ್ನು ಈವರೆಗೂ ವಿಚಾರಣೆಗೊಳಪಡಿಸಲಾಗಿಲ್ಲ ಎಂದು ಮಂಡ್ಯ ಗ್ರಾಮೀಣ ಪೊಲೀಸ್ ಅಧಿಕಾರಿ ಆನಂದ್ ಕುಮಾರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್