ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಜಿಲ್ಲಾ ಪಂಚಾಯತ್ ಸಿಇಒ ವಿರುದ್ಧ ಕ್ರಮ: ಸರ್ಕಾರ ಭರವಸೆ

ಕೊಳಚೆ ನೀರು ದಾಟಲು ಹಿಂಜರಿದ್ದ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಭರವಸೆಯನ್ನು ನೀಡಿದೆ...

ಬೆಂಗಳೂರು; ಕೊಳಚೆ ನೀರು ದಾಟಲು ಹಿಂಜರಿದ್ದ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಭರವಸೆಯನ್ನು ನೀಡಿದೆ. 
ಬರ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆಗೆಂದು ತೆರಳಿದ್ದ ಜಿಲ್ಲಾ ಪಂಚಾಯತ್ ಸಿಇಒ ಕೊಳಚೆ ನೀರು ದಾಟಲು ಹಿಂದೇಟು ಹಾಕಿದ್ದರು. ಈ ಹಿನ್ನಲೆಯಲ್ಲಿ ಊರಿನ ಗ್ರಾಮಸ್ಥರೇ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸ್ಥಳಕ್ಕೆ ತಲುಪಿಸಿದ್ದರು. ತುಮಕೂರಿನ ಅತ್ಕೂರು ಗ್ರಾಮದಲ್ಲಿ ಘಟನೆ ನಡೆದಿತ್ತು. 
ಅಧಿಕಾರಿಯ ಈ ವರ್ತನೆಗೆ ತೀವ್ರ ಟೀಕೆಗಳು ವ್ಯಕ್ತವಾಗತೊಡಗಿದ್ದವು. ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು. ಜೆಡಿಎಸ್ ಸದಸ್ಯ ಮನಪ್ಪ ವಿಜ್ಜಲ್ ಅವರು ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಇದಕ್ಕೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟ ಹಾಗೂ ಇತರೆ ನಾಯಕರೂ ಕೂಡ ದನಿಗೂಡಿಸಿದ್ದರು. 
ನಂತರ ಮಾತನಾಡಿದ ಸ್ಪೀಕರ್ ಕೆ.ಬಿ. ಕೋಳಿವಾಡ ಅವರು, ರಾಯಚೂರು ಉಪ ಆಯುಕ್ರ ಬಳಿ ವರದಿ ಪಡೆದು ಕೂಡಲೇ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. 
ಬರ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆಗೆಂದು ಜಿಲ್ಲಾ ಸಿಇಒ ಎಂ. ಕೂರ್ಮಾ ರಾವ್, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೇ ಹಾಗೂ ಸದಸ್ಯರು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಕುಡಿಯುವ ನೀರಿನ ಘಟಕದ ಸುತ್ತಲೂ ಕೊಳಚೆ ನೀರು ನಿಂತಿದ್ದು ಸಮಸ್ಯೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ಆದರೆ, ಬೂಟು ಧರಿಸಿದ್ದ ಜಿಪಂ ಕೂರ್ಮಾ ರಾವ್ ಕೊಳಚೆ ನೀರು ದಾಟಿಕೊಂಡು ನೀರುವ ಘಟಕದ ಬಳಿ ತೆರಳಲು ಹಿಂದೇಟು ಹಾಕಿದ್ದರು. 
ಹೇಗಾದರೂ ಬರ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲೇಬೇಕೆಂದು ಗ್ರಾಮಸ್ಥರು ಕೊನೆಗೆ ತಾವೇ ಸಿಇಒ ಅವರನ್ನು ಹೆಗಲ ಮೇಲೆ ಹೊತ್ತು ನಡೆದುಕೊಂಡೇ ಘಟಕದ ಜಾಗಕ್ಕೆ ಕರೆದೊಯ್ದಿದ್ದರು. ಪರಿಶೀಲನೆ ಬಳಿಕ ಮತ್ತೆ ಅದೇ ರೀತಿ ಹೆಗಲ ಮೇಲೆ ಹೊತ್ತು ಮೊದಲಿದ್ದ ಜಾಗಕ್ಕೆ ತಂದು ಬಿಟ್ಟಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!