ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್'ಗೆ ನೋಟಿಸ್ ಜಾರಿ

Manjula VN
ಮೈಸೂರು: ನಂಜನಗೂಡು ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಹೇಳಿ ಚುನಾವಣಾಧಿಕಾರಿಗಳು ಸೋಮವಾರ ನೋಟಿಸ್'ನ್ನು ಜಾರಿ ಮಾಡಿದ್ದಾರೆ. 
ಕಳೆದ ಭಾನುವಾರ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಸಮಯದಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ವೃದ್ಧೆಯೊಬ್ಬರಿಗೆ ರೂ.100ನ್ನು ನೀಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು ಈ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಶ್ರೀನಿವಾಸ್ ಪ್ರಸಾದ್ ಅವರ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ. 
ಅನುಪತಿ ಪಡೆದು ಷರತ್ತುಗಳನ್ನು ಉಲ್ಲಂಘನೆ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದರಿಂದ ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್ ನಲ್ಲಿ ಕೇಳಿದ್ದಾರೆ. ಅಲ್ಲದೆ. ನೋಟಿಸ್ ತಲುಪಿದ 24 ಗಂಟೆಯೊಳಗಾಗಿ ಲಿಖಿತ ವಿವರಣೆಗಳ ಮೂಲಕ ಉತ್ತರವನ್ನು ನೀಡಬೇಕೆಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಚುನಾವಣಾ ನೀತಿಯನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಮೈಸೂರು ಜಿಲ್ಲೆ ಬಿಜೆಪಿ ಕಾರ್ಯದರ್ಶಿ ಉಮೇಶ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ. 
SCROLL FOR NEXT