ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ನಾಲ್ವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಡೆಸುತ್ತಿದ್ದ ತನಿಖೆಗೆ ಸುಪ್ರೀಂಕೋರ್ಟ್ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
ಫೆಬ್ರವರಿ 22ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜಿ ಎಚ್ ನಾಗಹನುಮಯ್ಯ ಮತ್ತಿತ್ತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಸ್ ಎ ಬೊಬ್ಡೆ ಮತ್ತು ಎನ್ ನಾಗೇಶ್ವರ ರಾವ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಮುಂದಿನ ಆದೇಶದವರೆಗೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.
ಅಕ್ರಮ ಆಸ್ತಿ ಆರೋಪ ಎದುರಿಸುತ್ತಿರುವ ನಾಲ್ವರು ಸರ್ಕಾರಿ ಅಧಿಕಾರಿಗಳಾದ ಬಿಡಿಎ ವಿಶೇಷ ಭೂಸ್ವಾಧೀನ ಅಧಿಕಾರಿ ಜಿ ಎಚ್ ನಾಗಹನುಮಯ್ಯ, ಬಿಡಿಎ ಜಮೀನು ದಾಖಲೆಗಳ ಉಪನಿರ್ದೇಶಕ ಇ ಪ್ರಕಾಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜ್ ಸೇಲಗಿ ಮತ್ತು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜು ವಿರುದ್ಧ ಎಸಿಬಿ ತನಿಖೆ ನಡೆಸುತ್ತಿದ್ದು ಸುಪ್ರೀಂಕೋರ್ಟ್ ತಡೆಯಾಜ್ಞೆ ಹಿನ್ನಲೆ ಇದೀಗ ಎಸಿಬಿಗೆ ಭಾರೀ ಹಿನ್ನಡೆಯಾಗಿದೆ.
ಫೆಬ್ರವರಿ 22 ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ನಡೆಯುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತೆರವುಗೊಳಿಸಿದ್ದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ತನಿಖೆಯನ್ನು ಮುಂದುವರಿಸಲು ಸಮ್ಮತಿ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics