ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕಿ, ಮಾಜಿ ಸಚಿವೆ ನಫೀಜ್ ಫಜಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಎಸ್ ಎಂ ಕೃಷ್ಣ ಅವರ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸಿದ್ದ ನಫೀಜ್ ಫಜಲ್ ಕೃಷ್ಣ ಅವರ ಹಾದಿಯಲ್ಲೇ ನಡೆದಿದ್ದು, ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಮ್ಮ ಪಕ್ಷಕ್ಕೆ ಹೊಸಬರಾಗಿರುವ ಮುಖ್ಯಮಂತ್ರಿಗಳು ಮುಸ್ಲಿಂ ನಾಯಕರಿಗೆ ಹೆಚ್ಚು ಸ್ವಾತಂತ್ರ್ಯ ನೀಡಿದ್ದರಿಂದ ನಾನು ಮುಸ್ಲಿಂ ನಾಯಕರಿಂದ ಅವಮಾನಕ್ಕೊಳಗಾದೆ. ರಾಜ್ಯದ ಕಾರ್ಯಕರ್ತರು ಹೇಳುವುದನ್ನು ಕೇಳುವುದಕ್ಕೆ ಕೇಂದ್ರ ನಾಯಕರಿಗೆ ಸಮಯವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿರುವ ರಾಜೀನಾಮೆ ಪತ್ರದಲ್ಲಿ ನಫೀಜ್ ಫಜಲ್ ಹೇಳಿದ್ದಾರೆ.
ತಮ್ಮ ಸಾಮಾಜಿಕ ಸೇವೆಯನ್ನು ಗುರುತಿಸಿ ತಮ್ಮನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಬೇಕೆಂದು ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದಾಗ ಅವಮಾನ ಮಾಡಿದರು ಎಂದು ನಫೀಜ್ ಫಜಲ್ ಬೇಸರ ವ್ಯಕ್ತಪಡಿಸಿದ್ದಾರೆ.