ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಹಾಡಹಗಲೇ ನಡುರಸ್ತೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ಬರ್ಬರ ಹತ್ಯೆ

ಹಾಡಹಗಲೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರ ಕತ್ತು ಕೊಯ್ದು ಕೊಲೆ ಮಾಡಿರುವ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿಯಲ್ಲಿ ..

ಮೈಸೂರು: ಹಾಡಹಗಲೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರ ಕತ್ತು ಕೊಯ್ದು ಕೊಲೆ ಮಾಡಿರುವ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಗುತ್ತಲು ಲೇಔಟ್ ನಿವಾಸಿ (40) ವರ್ಷದ ಶಶಿಭೂಷಣ್ ಕೊಲೆಯಾದ ದುರ್ದೈವಿ, ಬಿದರಹೊಸಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮಂಡ್ಯದಿಂದ ಶಶಿಭೂಷಣ್ ಕೆಲಸದ ನಿಮಿತ್ತ ಬೈಕ್‍ನಲ್ಲಿ ಹೊರಟಿದ್ದರು. ಈ ವೇಳೆ ಶಶಿಭೂಷಣ್ ಅವರನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು, ಬೈಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಆಯತಪ್ಪಿ ಶಶಿಭೂಷಣ್ ಕೆಳಗೆ ಬಿದ್ದಿದ್ದಾರೆ. ತಕ್ಷಣ ಕಾರಿನಿಂದ ಕೆಳಗಿಳಿದ ದುಷ್ಕರ್ಮಿಗಳು, ಶಶಿಭೂಷಣ್ ಅವರ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೊಲೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಸ್ಥಳಕ್ಕೆ ಕೆ.ಎಂ ದೊಡ್ಡಿ ಪೊಲೀಸರು ಧಾವಿಸಿ ಶವವನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!