ಭಕ್ತರೊಬ್ಬರನ್ನು ಹರಸುತ್ತಿರುವ ಶಿವಕುಮಾರ ಸ್ವಾಮೀಜಿ 
ರಾಜ್ಯ

110 ನೇ ವರ್ಷಕ್ಕೆ ಕಾಲಿಟ್ಟ ನಡೆದಾಡುವ ದೇವರು: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಭಕ್ತರ ಒತ್ತಾಯ

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಪ್ರಸಿದ್ಧವಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು 110ನೇ ವಸಂತಕ್ಕೆ

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಪ್ರಸಿದ್ಧವಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು 110ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿದ್ದಗಂಗಾ ಮಠದಲ್ಲಿ ಅದ್ಧೂರಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಹಾಜರಾಗಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂಕರ ಮಂದಿ ಭಕ್ತರು ಆಗಮಿಸಿದ್ದಾರೆ.

ಶ್ರೀಗಳು 110ನೇ ವರ್ಷಕ್ಕೆ ಕಾಲಿಟ್ಟರುವ ಈ ವೇಳೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಗೌರವ ನೀಡಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.

2007 ರಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 100 ನೇ ವರ್ಷದ ಜನ್ಮ ದಿನಾಚರಣೆ ವೇಳೆ ಶ್ರೀಗಳಿಗೆ ಕರ್ನಾಟಕ ರತ್ನ ಗೌರವ ನೀಡಿ ಸನ್ಮಾನಿಸಲಾಗಿತ್ತು. ಶ್ರೀಗಳು ಪ್ರಶಸ್ತಿಗಿಂತಲೂ ದೊಡ್ಡವರು, ಆದರು ಅವರಿಗೆ ಒಂದು ಗೌರವ ಸೂಚಿಸಲು ಭಾರತ ರತ್ನ ನೀಡಬೇಕು ಎಂದು ಕೊಪ್ಪಳ ನಾಗರಾಜ್ ಎಂಬವರು ಹೇಳಿದ್ದಾರೆ.

ಕಳೆದ 50 ವರ್ಷಗಳಿಂದಲೂ ಪ್ರತಿ ವರ್ಷ8 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಆಹಾರ, ವಸತಿ ಹಾಗೂ ಶಿ7ಣ ನೀಡುತ್ತಿದ್ದಾರೆ, ಮಠ0 125  ಸಂಸ್ಥೆಗಳಲ್ಲಿ ಸಾವಿರಾರು ಮಂದಿ ಮೌಲ್ಯಯುತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೋಟೆಲ್ ಮಾಲಿಕ ಸಿ.ವಿ ಮಹಾದೇವ್ ಎಂಬುವರು ತಿಳಿಸಿದ್ದಾರೆ.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸಿದ್ದಗಂಗಾ ಶ್ರೀಗಳ ಹೆಸರನ್ನು ಭಾರತ ರತ್ನ ಪ್ರಶಸ್ತಿ  ಶಿಫಾರಸು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಭಾರತ ರತ್ನ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಶ್ರೀಗಳ ಹೆಸರನ್ನು ರಾಷ್ಟ್ರಪತಿಗಳ ಬಳಿ ಪ್ರಸ್ತಾಪಿಸಬೇಕು ಎಂದು ವಕೀಲ ಶಿವರಾಜ ಬಿ ನಂಜಪ್ಪ ಒತ್ತಾಯಿಸಿದ್ದಾರೆ.2015 ರಲ್ಲಿ ಕೇಂದ್ರ ಸರ್ಕಾರ ಶ್ರೀಗಳಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿರುವ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ; ರಾಹುಲ್ ಗಾಂಧಿ

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!