ಪ್ರದೀಪ್ ಸಿಂಗ್ ಖರೋಲಾ 
ರಾಜ್ಯ

ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಕೇಂದ್ರ ಸೇವೆಗೆ ವರ್ಗ

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಅವರನ್ನು ಭಾರತ ಸರ್ಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಿ ...

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಅವರನ್ನು  ಭಾರತ ಸರ್ಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಿ ನವದೆಹಲಿಗೆ ವರ್ಗಾಯಿಸಲಾಗಿದೆ.
2013  ಆಗಸ್ಟ್ 10 ರಂದು ಬಿಎಂಆರ್ ಸಿಎಲ್ ಎಂಡಿ ಯಾಗಿ ನೇಮಕಗೊಂಡಿದ್ದರು. ಮೆಟ್ರೋ ಒಳಸುರಂಗ ಮಾರ್ಗ ನಿರ್ಮಾಣದಂತಹ ನಿರ್ಣಾಯಕ ಅವಧಿ ಹಾಗೂ ಈಸ್ಟ್- ವೆಸ್ಟ್ ಕಾರಿಡಾರ್ ನಿರ್ಮಾಣದಲ್ಲಿ ಖರೋಲಾ ಉತ್ತಮ ಕಾರ್ಯ ನಿರ್ವಹಿಸಿದ್ದರು.
ಮುಂದಿನ ಜೂನ್ ತಿಂಗಳ ವೇಳೆಗೆ ಮೆಟ್ರೋ ಮೊದಲ ಹಂತ ಉದ್ಘಾಟನೆಯಾಗಲಿದ್ದು, ಅಲ್ಲಿಯವರೆಗೂ ಬಿಎಂಆರ್ ಸಿಎಲ್ ನಲ್ಲೇ ಮುಂದುವರಿಯಲು ಖರೋಲಾ ಬಯಸಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಈ ಸಂಬಂಧ ಪ್ರತಿಕ್ರಿಯಿಸಲು ಖರೋಲಾ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷಗಳ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು, Video!

ಧರ್ಮಸ್ಥಳದ ವಿರುದ್ಧ ಬಿಜೆಪಿಯಿಂದಲೇ ಷಡ್ಯಂತ್ರ: ಡಿಕೆ ಶಿವಕುಮಾರ್

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

SCROLL FOR NEXT