ಸಚಿವ ಸಂಪುಟ ಸಭೆ 
ರಾಜ್ಯ

ರಿಯಾಲ್ಟಿ ಮಸೂದೆಗೆ ಕಾನೂನು ಇಲಾಖೆ ಗ್ರೀನ್ ಸಿಗ್ನಲ್: ಬದಲಾವಣೆ ಇಲ್ಲದೇ ಜಾರಿಗೆ ಶಿಫಾರಸ್ಸು

ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಮಸೂದೆ 2016 ನ್ನು ಯಾವುದೇ ಬದಲಾವಣೆ ಮಾಡದೇ ಜಾರಿಗೊಳಿಸಲು ರಾಜ್ಯ ಕಾನೂನು ಇಲಾಖೆ ಒಪ್ಪಿಗೆ ನೀಡಿದೆ.

ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಮಸೂದೆ 2016 ನ್ನು ಯಾವುದೇ ಬದಲಾವಣೆ ಮಾಡದೇ ಜಾರಿಗೊಳಿಸಲು ರಾಜ್ಯ ಕಾನೂನು ಇಲಾಖೆ ಒಪ್ಪಿಗೆ ನೀಡಿದೆ. 
ಮುಂದಿನ ಪ್ರಕ್ರಿಯೆಯ ಭಾಗವಾಗಿ ಮಸೂದೆಯ ಸಮಗ್ರ ಅಧ್ಯಯನಕ್ಕೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರಿಯಾಲ್ಟಿ ಮಸೂದೆಯ ಬಗ್ಗೆ ಚರ್ಚೆ ನಡೆದಿದ್ದು, ಯುಡಿಡಿ ಅಭಿಪ್ರಾಯ ಪಡೆದು ತಡ ಮಾಡದೇ ಮಸೂದೆಯನ್ನು ಜಾರಿಗೊಳಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿಬಿ ಜಯಚಂದ್ರ ಹೇಳಿದ್ದಾರೆ. 
ಕಾನೂನು ಇಲಾಖೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ನನ್ನ ನೇತೃತ್ವದ ಸಂಪುಟ ಉಪಸಮಿತಿ ಸಹ ಮಸೂದೆ ಜಾರಿಗೆ ಒಪ್ಪಿಗೆ ಸೂಚಿಸಿದೆ. ಈಗ ನಗರಾಭಿವೃದ್ಧಿ ಇಲಾಖೆಯ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಸೂದೆ ಜಾರಿಗೆ ಬಂದಿದ್ದರೂ ಕರ್ನಾಟಕ ಆ ನಿಯಮಗಳ ಬಗ್ಗೆ ಅಧಿಸೂಚನೆ ಹೊರಡಿಸಬೇಕಿದೆ. ಕೆಲವೇ ವಾರಗಾಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಜಯಚಂದ್ರ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್