ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ: ಸ್ಥಳೀಯರಲ್ಲಿ ಆತಂಕ
ಭಾನುವಾರ ಮಧ್ಯಾಹ್ನ 2.45 ರ ಸುಮಾರಿಗೆ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಆತಂಕಕ್ಕೆ..
ಬೆಂಗಳೂರು: ಭಾನುವಾರ ಮಧ್ಯಾಹ್ನ 2.45 ರ ಸುಮಾರಿಗೆ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಜನವರಿಯಲ್ಲಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೆರೆ ಮಾಲಿನ್ಯಕ್ಕೆ ಇಲಾಖೆಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದವು. ಒಂದು ತಿಂಗಳಲ್ಲಿ ಜಲಮೂಲದ ಪುನರುಜ್ಜೀವನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಎನ್ಜಿಟಿ ನಿರ್ದೇಶನ ನೀಡಿತ್ತು. ಕಳೆದ 10 ದಿನಗಳಿಂದ ಕೆರೆಯಲ್ಲಿ ಕಳೆ ತೆಗೆಯುವ ಕೆಲಸ ನಡೆದಿದೆ.
ಕೆರೆಯ ಸುತ್ತಲಿನ ಕಾರ್ಖಾನೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕಾರಿ ವಿಷಯ. ಇದನ್ನು ಬಿಡಿಎ ಹಾಗೂ ಬಿಬಿಎಂಪಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೆ ಆದಂತೆ ಕೆರೆಯಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿಲ್ಲ, ಕೆರೆಯ ನಡುವೆ ಇದ್ದ ಒಣಹುಲ್ಲು ಮತ್ತು ಗಿಡಗಳಿಗೆ ಯಾರೋ ಬೆಂಕಿ ಹಾಕಿರುವುದರಿಂದ ಹೀಗಾಗಿದೆ ಎಂದು ಹೇಳಿದ್ದಾರೆ.
ಕೆರೆಯ ಈ ಭಾಗಕ್ಕೆ ಯಾರು ಹೋಗುವುದು ಸಾಧ್ಯವಿಲ್ಲದ ಕಾರಣ ಯಾವ ಕಾರಣಕ್ಕೆ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿಲ್ಲ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.