ಮಂಗಳೂರು: ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ ಪರಿಣಾಮ ಸುಮಾರು 20 ಕೋಟಿ ರು.ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿರುವ ಘಟನೆ ಮಂಗಳೂರಿನ ಗಂಜಿಮಠ್ ನಲ್ಲಿ ನಡೆದಿದೆ.
ಬಜ್ಪೆ ಸಮೀಪದ ಗಂಜಿಮಠ್ ನಲ್ಲಿರುವ ಮೋಹಾ ಪ್ಯಾಕೇಜಿಂಗ್ ಕಂಪನಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ, ಮೊಹಮದ್ ಹನೀಫ್ ಎಂಬುವರಿಗೆ ಸೇರಿದ ಕಾರ್ಖಾನೆಯಲ್ಲಿ ಬೆಳಗ್ಗಿನ ಜಾವ 5 ಗಂಟೆಗೆ ಈ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ, ಆದರೆ ಕಾರ್ಖಾನೆಯೊಳಗಿದ್ದ ಯಂತ್ರೋಪಕರಣಗಳು, ಪ್ಲಾಸ್ಟಿಕ್ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಇನ್ನೂ ಪ್ರಕರಣ ದಾಖಲಾಗಿಲ್ಲ.