ಸಂಗ್ರಹ ಚಿತ್ರ 
ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಮಠಕ್ಕೆ ವಾಪಸ್!

ಪಿತ್ತನಾಳದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶನಿವಾರ ಬಿಜಿಎಸ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡು ತುಮಕೂರು ಸಿದ್ದಗಂಗಾ ಮಠಕ್ಕೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಪಿತ್ತನಾಳದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶನಿವಾರ ಬಿಜಿಎಸ್‌ ಆಸ್ಪತ್ರೆಯಿಂದ  ಬಿಡುಗಡೆಗೊಂಡು ತುಮಕೂರು ಸಿದ್ದಗಂಗಾ ಮಠಕ್ಕೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆ ಮೂಲಗಳು ತಿಳಿಸಿರುವಂತೆ "ಸ್ವಾಮೀಜಿ ಅವರಿಗೆ ಪಿತ್ತನಾಳದ ಸೋಂಕಿನಿಂದ ಜ್ವರ ಬಂದಿತ್ತು. ಕಳೆದ ವರ್ಷ ಪಿತ್ತನಾಳಕ್ಕೆ ಸ್ಟೆಂಟ್‌ ಅಳವಡಿಸಿದ್ದೆವು. ಆದರೆ ಆ ಸ್ಟಂಟ್ ಬ್ಲಾಕ್‌ ಆಗಿತ್ತು. ಶುಕ್ರವಾರ ಅದನ್ನು ತೆಗೆದು ಹೊಸ  ಸ್ಟೆಂಟ್‌ ಅಳವಡಿಸಲಾಗಿತ್ತು. ಇದಕ್ಕೆ ಸ್ವಾಮೀಜಿ ಚೆನ್ನಾಗಿ ಸ್ಪಂದಿಸಿದ್ದು, ಅವರ ಆರೋಗ್ಯ ಈಗ ಸುಧಾರಿಸಿದೆ. ಪ್ರಸ್ತುತ ಸ್ವಾಮೀಜಿ ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ಅವರ ಆರೋಗ್ಯದ ನಿಗಾ ವಹಿಸಲು ಆಸ್ಪತ್ರೆಯ ಮೂರು ಮಂದಿ  ವೈದ್ಯರು ಸ್ವಾಮೀಜಿ ಅವರೊಂದಿಗೆ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ’ ಎಂದು ವೈದ್ಯರು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.20ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರನ್ನು ಆಸ್ಪತ್ರೆಯಿಂದ ಕಾರಿನಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT